HomeFresh Newsಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ:ಕಾನೂನು ಮಾಹಿತಿ ಕಾರ್ಯಗಾರ

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ:ಕಾನೂನು ಮಾಹಿತಿ ಕಾರ್ಯಗಾರ

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಹಾಗೂ ಕಾನೂನು ಮಾಹಿತಿ ಕಾರ್ಯಗಾರ
ಕಡಬದ ಹನುಮಾನ್ ನಗರದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಹಾಗೂ ಕಾನೂನು ಮಾಹಿತಿ ಕಾರ್ಯಗಾರ ಮಂಗಳವಾರ ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಕಡಬ ಆರಕ್ಷಕ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಶಿವರಾಮ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಕಾನೂನುಬಾಹಿರ ಚಟುವಟಿಕೆಗಳು, ಅವುಗಳ ದುಷ್ಪರಿಣಾಮಗಳು ಹಾಗೂ ಸಮಾಜದ ಮೇಲಿನ ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಶಾಲಾ ಮಂತ್ರಿಮಂಡಲಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ಚಂದ್ರ ಕೆ. ಪ್ರಮಾಣವಚನ ಬೋಧಿಸಿದರು.
ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಡಬ ಠಾಣೆಯ ಹೆಡ್‌ಕಾನ್ಸ್ಟೇಬಲ್ ಮಹೇಶ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಸದಾಶಿವ ಭಟ್ ಹಾಗೂ ಮುಖ್ಯಗುರು ವಸಂತ ಕೆ. ಉಪಸ್ಥಿತರಿದ್ದರು.
ಶಿಕ್ಷಕಿ ಸುಮಂಗಲ ಎ. ಸ್ವಾಗತಿಸಿದರು. ವಿದ್ಯಾರ್ಥಿನಿ ಜಿ. ಶಾರ್ವರಿ ಬನ್ನಿಂತ್ತಾಯ ವಂದಿಸಿದರು. ದ್ವಿಜಾ ಎಚ್. ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments