HomeFresh Newsವಿವೇಕಾನಂದ ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರೈಲ್ವೇ ಸಂಕದ ರಸ್ತೆಯ ದುರಸ್ತಿಗೆ ಮನವಿ

ವಿವೇಕಾನಂದ ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರೈಲ್ವೇ ಸಂಕದ ರಸ್ತೆಯ ದುರಸ್ತಿಗೆ ಮನವಿ

ಪುತ್ತೂರು ಇದರ ವಿವಿಧ ಶಿಕ್ಷಣ ಸಂಸ್ಥೆಗಳಿರುವ ವಿವೇಕಾನಂದ ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರೈಲ್ವೇ ಸಂಕದ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ದುರಸ್ತಿ ಹಾಗೂ ಡಾಮರೀಕರಣಕ್ಕೆ ಸಂಘದ ವತಿಯಿಂದ ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಲಾಗಿದೆ.

ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಬಳಸುವ ಈ ರಸ್ತೆಯಲ್ಲಿ ಹಲವೆಡೆ ದೊಡ್ಡ ಗುಂಡಿಗಳು ಉಂಟಾಗಿದ್ದು, ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ನಿಂತು ವಾಹನ ಸವಾರರು ಹಾಗೂ ಪಾದಚಾರಿಗಳು ಅಪಘಾತಕ್ಕೆ ಒಳಗಾಗುವ ಸಂಭವ ಹೆಚ್ಚಾಗಿದೆ.

‘ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಗುಂಡಿಗಳನ್ನು ತುರ್ತಾಗಿ ಮುಚ್ಚಿಸಿ, ಸಂಪೂರ್ಣ ರಸ್ತೆಯನ್ನು ಡಾಮರೀಕರಣಗೊಳಿಸಿ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು” ಎಂದು ಸಂಘವು ಮನವಿಯಲ್ಲಿ ಒತ್ತಾಯಿಸಿದೆ. ರಸ್ತೆಯ ಪ್ರಸ್ತುತ ದುಃಸ್ಥಿತಿಯನ್ನು ತೋರಿಸುವ ಛಾಯಾಚಿತ್ರಗಳನ್ನು ಮನವಿಯೊಂದಿಗೆ ಲಗತ್ತಿಸಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments