ಕಾಪು: ಬಿಜೆಪಿ ಯುವ ಮೋರ್ಚಾ, ಕಾಪು ಮಂಡಲ ನೇತೃತ್ವದಲ್ಲಿ 21-06-2026 ಆದಿತ್ಯವಾರ ಕಾಪು ಲೈಟ್ ಹೌಸ್ ಕಡಲ ತೀರದ ಓಶಿಯನ್ ಬೀಚ್ ರೆಸಾರ್ಟ್ ನಲ್ಲಿ “ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಹಮ್ಮಿಕೊಳ್ಳಲಾಗಿದ್ದು ಇದರ ಪೂರ್ವಭಾವಿಯಾಗಿ ದಿನಾಂಕ 19-06-2026 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಸಚಿನ್ ಉದ್ಯಾವರ, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಮಟ್ಟಾರು, ಅಶ್ವಿನ್ ಕೈಪುಂಜಾಲು ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.


