ಕಾಪು: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಡುಪಿ ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ 19-06-2026 ರಂದು ಉಡುಪಿ ತಹಸೀಲ್ದಾರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

23 ಕಡತ ಪರಿಶೀಲನೆ ನಡೆಸಿ ಸಭೆಯಲ್ಲಿ 11ಕಡತಗಳಿಗೆ ತಾತ್ಕಾಲಿಕ ಮಂಜೂರಾತಿ ನೀಡಿ ಮೊಜಣಿ ನಕ್ಷೆಗಾಗಿ ಎ.ಡಿ.ಎಲ್.ಆರ್ ಇವರಿಗೆ ಕಡತ ರವಾನಿಸಲಾಯಿತು. ಉಳಿದ 12 ಕಡತಗಳಿಗೆ ಖಾಯಂ ಮಂಜೂರಾತಿ ನೀಡಲಾಯಿತು. ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಉಡುಪಿ ತಹಶೀಲ್ದಾರರಾದ ಗುರುರಾಜ್, ಅಕ್ರಮ ಸಕ್ರಮ ಸಮಿತಿ ಸದಸ್ಯರುಗಳಾದ ದಿನೇಶ್ ಕೋಟ್ಯಾನ್, ಆನಂದ ಕೊರಂಗ್ರಪಾಡಿ, ಮಾರ್ಗರೇಟ್ ಸೀಮಾ ಡಿಸೋಜಾ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.


