HomeFresh Newsವರ್ಧಮಾನ ಸಾಹಿತ್ಯ ಪ್ರಶಸ್ತಿಗೆ ಡಾ. ಪಾದೇಕಲ್ಲು ವಿಷ್ಣು ಭಟ್ ಆಯ್ಕೆ: ಟಿ.ಎ.ಎನ್. ಖಂಡಿಗೆಗೆ ಉದಯೋನ್ಮುಖ ಸಾಹಿತ್ಯ...

ವರ್ಧಮಾನ ಸಾಹಿತ್ಯ ಪ್ರಶಸ್ತಿಗೆ ಡಾ. ಪಾದೇಕಲ್ಲು ವಿಷ್ಣು ಭಟ್ ಆಯ್ಕೆ: ಟಿ.ಎ.ಎನ್. ಖಂಡಿಗೆಗೆ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ

ಮೂಡುಬಿದಿರೆ: ವರ್ಧಮಾನ ಪ್ರಶಸ್ತಿ ಪೀಠವು 2025ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದ್ದು, ಹಿರಿಯ ಸಾಹಿತಿ ಡಾ. ಪಾದೇಕಲ್ಲು ವಿಷ್ಣು ಭಟ್ ಅವರಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ ಹಾಗೂ ಉಪನ್ಯಾಸಕ, ಲೇಖಕ ಟಿ.ಎ.ಎನ್. ಖಂಡಿಗೆ ಅವರಿಗೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ ಲಭಿಸಿದೆ.

ವರ್ಧಮಾನ ಸಾಹಿತ್ಯ ಪ್ರಶಸ್ತಿಯು 25 ಸಾವಿರ ರೂ. ಗೌರವ ಸಂಭಾವನೆ, ತಾಮ್ರಪತ್ರ ಹಾಗೂ ಸನ್ಮಾನವನ್ನು ಒಳಗೊಂಡಿದೆ. ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯು 15 ಸಾವಿರ ರೂ. ಗೌರವ ಸಂಭಾವನೆ, ತಾಮ್ರಪತ್ರ ಹಾಗೂ ಸನ್ಮಾನವನ್ನು ಒಳಗೊಂಡಿದೆ.
ಜೂನ್ 20ರಂದು ನಡೆದ ವರ್ಧಮಾನ ಪ್ರಶಸ್ತಿ ಪೀಠದ ಮಹಾಸಭೆಯು ಪೀಠದ ಅಧ್ಯಕ್ಷ ಎಸ್.ಡಿ. ಸಂಪತ್ ಸಾಮ್ರಾಜ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಾಲಿನ ತೀರ್ಪುಗಾರರಾದ ವಿಮರ್ಶಕ ಡಾ. ಬಿ. ಜನಾರ್ದನ ಭಟ್, ಪ್ರಾಧ್ಯಾಪಕ ಬಿ.ಪಿ. ಸಂಪತ್ ಕುಮಾರ್ ಹಾಗೂ ವಿಮರ್ಶಕ ಬೆಳಗೋಡು ರಮೇಶ ಭಟ್ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯು ನೀಡಿದ ಶಿಫಾರಸಿನ ಆಧಾರದಲ್ಲಿ ಪ್ರಶಸ್ತಿಗಳನ್ನು ನಿರ್ಣಯಿಸಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ ತಿಂಗಳಲ್ಲಿ ಮೂಡುಬಿದಿರೆಯ ಸಮಾಜಮಂದಿರ ಸಭಾಂಗಣದಲ್ಲಿ ನಡೆಯಲಿರುವ ದಸರಾ ಸಾಹಿತ್ಯೋತ್ಸವದಲ್ಲಿ ಜರುಗಲಿದೆ ಎಂದು ಪೀಠದ ಪ್ರಧಾನ ನಿರ್ದೇಶಕ ಡಾ. ನಾ. ಮೊಗಸಾಲೆ ತಿಳಿಸಿದ್ದಾರೆ.

sudha add new -
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments