HomeFresh Newsಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

ಕಿನ್ನಿಗೋಳಿ: ದಿನಾಂಕ 25-06-2026 ರಂದು ರೋಟರಿ ಆಂಗ್ಲ ಮಾಧ್ಯಮ ಕಿನ್ನಿಗೋಳಿ ಶಾಲೆಯಲ್ಲಿ ಶಾಲಾ ಸಂಸತ್ತಿನ ಉದ್ಘಾಟನೆ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭವು ನಡೆಯಿತು. ವಿದ್ಯಾರ್ಥಿ ನಾಯಕರು ಪಥಸಂಚಲನದ ಮೂಲಕ ವೇದಿಕೆಗೆ ಆಗಮಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಗೌರವ್ ಆರ್.ಕೆ., ಪ್ರಾಂಶುಪಾಲರು, ಲಯನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಸಚ್ಚರಿಪೇಟೆ, ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ವಿದ್ಯಾರ್ಥಿಗಳಿಗೆ ನಾಯಕತ್ವವು ಹುಟ್ಟಿನಿಂದ ಮತ್ತು ಆಕಸ್ಮಿಕ ವಾಗಿ ಸಿಗುವುದು
ಶಾಲಾ ಸಂಸತ್ತಿನ ಸದಸ್ಯರಿಗೆ ಅವರು ಕರೆ ನೀಡುತ್ತಾ, “ಈ ಶಾಲಾ ಸಂಸತ್ತಿನಲ್ಲಿ ನಿಮಗೆ ನೀಡಿರುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ಶಾಲೆಯ ಉನ್ನತಿಗಾಗಿ ಶ್ರಮಿಸಬೇಕು. ನಿಮ್ಮಲ್ಲಿ ಆತ್ಮವಿಶ್ವಾಸ (Confidence), ಪ್ರೇರಣೆ (Motivation) ಮತ್ತು ಜವಾಬ್ದಾರಿತನ (Responsibility) ಎಂಬ ಮೂರು ಪ್ರಮುಖ ಗುಣಗಳನ್ನು ಮೈಗೂಡಿಸಿಕೊಂಡು, ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಶಾಲೆಯ ಅಭಿವೃದ್ಧಿಗೆ ಶ್ರಮಿಸಬೇಕು” ಎಂದು ತಿಳಿಸಿದರು.
ವಿದ್ಯಾರ್ಥಿ ನಾಯಕರಿಗೆ ಸ್ಯಾಶ್ ಮತ್ತು ಬ್ಯಾಡ್ಜ್‌ಗಳನ್ನು ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷರು ರೊ. ಶೇಷಾರಾಮ್ ಶೆಟ್ಟಿ, ಖಜಾಂಚಿಗಳಾದ ರೊ. ಶರತ್ ಶೆಟ್ಟಿ, ಸದಸ್ಯರಾದ ರೊ. ಸ್ವರಾಜ್ ಎಸ್. ಶೆಟ್ಟಿ, ರೊ. ಪ್ರವೀಣ್ ಸಾಲಿಯಾನ್ ಮತ್ತು ರೊ. ದೇವಿದಾಸ್ ಶೆಟ್ಟಿ ಅವರು ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನಿತಾ ಗುರುರಾಜ್ ಅವರು ವಿದ್ಯಾರ್ಥಿ ನಾಯಕರಿಗೆ ಪ್ರಮಾಣ ವಚನ ಬೋಧಿಸಿದರು. ನೂತನ ಶಾಲಾ ನಾಯಕರಾದ ಮಾಸ್ಟರ್ ಅಮೋಘ ಹಾಗೂ ಕುಮಾರಿ ತ್ರಿಷಾ ಅವರು ತಮ್ಮ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಕುರಿತು ಮಾತನಾಡಿದರು.
ಕಾರ್ಯಕ್ರಮವನ್ನು ಕುಮಾರಿ ಅನ್ವಿ ಎಸ್. ಶೆಟ್ಟಿ ಸ್ವಾಗತಿಸಿದರು. ಮಾಸ್ಟರ್ ರೋಲ್ವಿನ್ ಅತಿಥಿ ಪರಿಚಯ ಮಾಡಿಕೊಟ್ಟರು. ಮಾಸ್ಟರ್ ಆರ್ಯನ್ ವಿದ್ಯಾರ್ಥಿ ನಾಯಕರ ಪರಿಚಯ ಮಾಡಿಕೊಟ್ಟರು. ಕುಮಾರಿ ಅನನ್ಯ ಕಾರ್ಯಕ್ರಮವನ್ನು ನಿರೂಪಿಸಿದರೆ, ಕುಮಾರಿ ದೀಪ್ತಿ ಶೆಟ್ಟಿ ವಂದನಾರ್ಪಣೆ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments