HomeFresh Newsಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್...

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆದ ಗೌರವಾನ್ವಿತ ನ್ಯಾಯದಿಶರಾದ ದೀಪಾ ಕೆ. ಆರ್ ಇವರು ಕುಟುಂಬ ಸಮೇತರಾಗಿ ಉಡುಪಿಗೆ ಭೇಟಿ ನೀಡಿದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಮಾತೃ ವೈಭವ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕ ಶ್ರೀಕರ್ ಶೆಟ್ಟಿ ಕಲ್ಯಾ, ಸಂತೋಷ ಶೆಟ್ಟಿ ತೆಂಕರಗುತ್ತು, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments