HomeFresh Newsಲೋಕಸಭಾ ಕ್ಷೇತ್ರದ ಸಂಸದ ಡಾ. ಶ್ರೀಕಾಂತ್ ಶಿಂಧೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಲೋಕಸಭಾ ಕ್ಷೇತ್ರದ ಸಂಸದ ಡಾ. ಶ್ರೀಕಾಂತ್ ಶಿಂಧೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು: ಮಹಾರಾಷ್ಟ್ರದ ಹಾಲಿ ಉಪಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಯಾದ ಏಕನಾಥ್ ಶಿಂಧೆ ಅವರ ಪುತ್ರ ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದ ಡಾ. ಶ್ರೀಕಾಂತ್ ಶಿಂಧೆ ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.

ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನ ಅನುಗ್ರಹ ಪ್ರಸಾದ ನೀಡಿದರು.

ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂಧಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

sudha add new -
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments