ಉಡುಪಿಯ ಜಯಲಕ್ಷ್ಮೀ ಸಿಲ್ಕ್ಸ್ ಮುಂಭಾಗದಲ್ಲಿ ಅವೈಜ್ಞಾನಿಕ ಡಿವೈಡರ್ ನಿಂದಾಗಿ ಸರಣಿ ಅಪಘಾತ; ಎರಡು ಕಾರು ಜಖಂ
ಉಡುಪಿ: ಉಡುಪಿ ಜಯಲಕ್ಷ್ಮೀ ಸಿಲ್ಕ್ಸ್ ಮುಂಭಾಗದಲ್ಲಿ ರಾ.ಹೆ. (169ಎ)ರಲ್ಲಿ ಶನಿವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಎರಡು ಕಾರುಗಳು ಜಖಂಗೊಂಡಿವೆ.
ಬನ್ನಂಜೆ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಎರಡು ಕಾರುಗಳಿಗೆ ಡಿಕ್ಕಿ ಹೊಡಿದಿದೆ ಎನ್ನಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.
ಅಪಘಾತದ ಪರಿಣಾಮ ಕೆಲಕಾಲ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಬಳಿಕ ಸಂಚಾರ ಪೊಲೀಸರು ವಾಹನಗಳ ಸಂಚಾರವನ್ನು ಸುಗಮಗೊಳಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಡಿವೈಡರ್ ಮಾಡಿದ್ದು,ಇದರಿಂದಾಗಿ ವಾಹನನ ದಟ್ಟಣೆ ಉಂಟಾಗಿ ಅಫಘಾತಗಳು ನಡೆಯುತ್ತಿದ್ದು,ಹೆದ್ದಾರಿ ಪ್ರಾಧಿಕಾರ ಅಪಘಾತಕ್ಕೆ ಎಡೆ ಮಾಡಿಕೊಡುತ್ತಿರುವ ಅವೈಜ್ಞಾನಿಕ ಡಿವೈಡರ್ ನ್ನು ಮುಚ್ಚುವಂತೆ ಸಾರ್ವಜನಿಕರು ಅಗ್ರಹಿಸಿದ್ದಾರೆ.


