ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ಇಂದು ಮುಂಜಾನೆ ಸುಳ್ಯದ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಹೃದಯ ಸಂಬಂಧಿ ಸಮಸ್ಯೆಯಿಂದ ಅವರು ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಮುಂಜಾನೆ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದರು.


