HomeFresh Newsಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ ಸಂಪರ್ಕ ಸಭೆ - ಗ್ರಾಮಸ್ಥರ ಅಹವಾಲು ಸ್ವೀಕಾರ -...

ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ ಸಂಪರ್ಕ ಸಭೆ – ಗ್ರಾಮಸ್ಥರ ಅಹವಾಲು ಸ್ವೀಕಾರ – ವಿವಿಧ ಸವಲತ್ತು ವಿತರಣೆ

ಕಾಪು:ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವು ದಿನಾಂಕ 06-07-2026 ರಂದು ಕುರ್ಕಾಲು ಗ್ರಾಮ ಪಂಚಾಯತ್ ನಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ನ 25 ಶೇಖಡಾ ಅನುದಾನದಲ್ಲಿ 2 ಫಲಾನುಭವಿಗಳಿಗೆ ಕುಲ ಕಸುಬು ಮತ್ತು ಮದುವೆ ಧನ ಸಹಾಯ ಹಾಗೂ 5 ಶೇಖಡಾ ಅನುದಾನದಲ್ಲಿ 9 ವಿಕಲಚೇತನ ಫಲಾನುಭವಿಗಳಿಗೆ ವೈದ್ಯಕೀಯ ಸಹಾಯ ಧನ ಚಕ್ ವಿತರಣೆ ಮಾಡಲಾಯಿತು.

ಶಾಸಕರ ಶಿಫಾರಸ್ಸಿನ ಮೇರೆಗೆ ವಿವಿಧ ರಸ್ತೆಗಳ ಅಭಿವೃದ್ಧಿಗೆ 40 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ತಹಶೀಲ್ದಾರರಾದ ಅಂನತ ಶಂಕರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ ಕುಮಾರ್, ಪಂಚಾಯತ್ ಆಡಳಿತಾಧಿಕಾರಿಗಳಾದ ಗುರುಪ್ರಸಾದ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಯೋಗಿತಾ, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments