HomeFresh Newsವಯನಾಡ್ ಮೇಪ್ಪಾಡಿ ಭೂಕುಸಿತ: ನಾಪತ್ತೆಯಾದ ಐವರಿಗಾಗಿ ಮುಂದುವರಿದ ಶೋಧ ಕಾರ್ಯ

ವಯನಾಡ್ ಮೇಪ್ಪಾಡಿ ಭೂಕುಸಿತ: ನಾಪತ್ತೆಯಾದ ಐವರಿಗಾಗಿ ಮುಂದುವರಿದ ಶೋಧ ಕಾರ್ಯ

ಕೇರಳದ ವಯನಾಡು ಜಿಲ್ಲೆಯ ಮೇಪ್ಪಾಡಿಯಲ್ಲಿ ಸುರಂಗ ರಸ್ತೆ ನಿರ್ಮಾಣದ ಸ್ಥಳದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ನಾಪತ್ತೆಯಾಗಿರುವ ಐವರಿಗಾಗಿ ಬುಧವಾರ ಎರಡನೇ ದಿನವೂ ಕಾರ್ಯಾಚರಣೆ ಮುಂದುವರಿದಿದೆ. ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಪೊಲೀಸರು ಅಸಹಜ ಮರಣ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮೃತರನ್ನು ವಲಸೆ ಕಾರ್ಮಿಕರಾದ ಮಧ್ಯಪ್ರದೇಶದ ಯಂತ್ರ ಚಾಲಕ ಚಂದ್ರಭಾನ್, ಬಿಹಾರದ ಬಿಕಾಶ್ ಕುಮಾರ್ ಮತ್ತು ಜಾರ್ಖಂಡ್ ನ ಅನ್ಮೋಲ್ ಎಂದು ಗುರುತಿಸಲಾಗಿದೆ. ಏಳು ಗಾಯಾಳುಗಳನ್ನು ಮೆಪ್ಪಾಡಿ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿಯುತ್ತಿದೆ.

ಭೂಕುಸಿತವನ್ನು ಮಾನವ ನಿರ್ಮಿತ ವಿಕೋಪ ಎಂದು ಹೇಳಿರುವ ರಾಜ್ಯ ಸರ್ಕಾರ, ಜಿಲ್ಲಾಡಳಿತ ಮತ್ತು ಲೋಕೋಪಯೋಗಿ ಸಚಿವ ಪಿ.ಕೆ. ಬಶೀರ್ ಅವರ ಸೂಚನೆಯ ಹೊರತಾಗಿಯೂ ನಿರ್ಮಾಣ ಸ್ಥಳದಲ್ಲಿ ಸಂಗ್ರಹವಾಗಿದ್ದ ಮಣ್ಣನ್ನು ನಿರ್ಮಾಣ ಕಂಪನಿಯು ತೆರವುಗೊಳಿಸಿರಲಿಲ್ಲ ಎಂದು ಆರೋಪಿಸಿದೆ.

ಆದರೆ ನಿರ್ಮಾಣ ಕಂಪನಿಯ ಜನರಲ್ ಮ್ಯಾನೇಜರ್ ಈ ಆರೋಪವನ್ನು ತಳ್ಳಿಹಾಕಿದ್ದು, ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕಿಂತ ಸಾಕಷ್ಟು ಎತ್ತರದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ನಿರ್ಮಾಣಕ್ಕಾಗಿ ಕಂಪನಿಗೆ ನೀಡಲಾದ ಜಾಗದಲ್ಲಿ ಈ ಘಟನೆ ನಡೆದಿಲ್ಲ ಮತ್ತು ಅಲ್ಲಿ ಸಂಗ್ರಹವಾಗಿದ್ದ ಮಣ್ಣು ಈ ವಿಕೋಪಕ್ಕೆ ಕಾರಣವಲ್ಲ ಎಂದು ಅವರು ಹೇಳಿದ್ದಾರೆ.

Swarna- add
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments