HomeUncategorizedರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ಉದ್ಘಾಟನೆ

ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ಉದ್ಘಾಟನೆ

ಕಿನ್ನಿಗೋಳಿ: ದಿನಾಂಕ 07/07/2026 ರಂದು ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026–27ನೇ ಸಾಲಿನ ಇಂಟರಾಕ್ಟ್ ಕ್ಲಬ್ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ 2026–27ನೇ ಸಾಲಿನ ರೋಟರಿ ಕ್ಲಬ್ ಅಧ್ಯಕ್ಷರಾದ ರೋ. ಪ್ರವೀಣ್ ಸಾಲ್ಯಾನ್ ರವರು ಶಾಲೆಯ ಇಂಟರಾಕ್ಟ್ ಕ್ಲಬ್ ಅಧ್ಯಕ್ಷೆ ಸಮಂತಾ ಪಿಂಟೋ ಅವರಿಗೆ ಕೊರಳ ಲಾಂಛನವನ್ನು ತೊಡಿಸಿ ಗೌರವಿಸಿದರು.

ಇಂಟರಾಕ್ಟ್ ಕ್ಲಬ್ ನಿರ್ದೇಶಕರಾದ ರೊ. ಹೆರಿಕ್ ಪಾಯಸ್ ಅವರು ರೋಟರಿ ಇಂಟರಾಕ್ಟ್ ಕ್ಲಬ್‌ನ ಧ್ಯೇಯ, ಉದ್ದೇಶ ಹಾಗೂ ಸಮಾಜಸೇವೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸುತ್ತಾ, ವರ್ಷಪೂರ್ತಿ ವಿವಿಧ ಸೇವಾ ಚಟುವಟಿಕೆಗಳು ಹಾಗೂ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ರೋಟರಿ ಕ್ಲಬ್ ಅಧ್ಯಕ್ಷರಾದ ರೊ. ಪ್ರವೀಣ್ ಸಾಲ್ಯಾನ್ ರವರು ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದರ ಜೊತೆಗೆ ಸೇವಾ ಮನೋಭಾವ, ಶಿಸ್ತು ಮತ್ತು ಜವಾಬ್ದಾರಿಯುತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇಂಟರಾಕ್ಟ್ ವಲಯದ ಪ್ರತಿನಿಧಿಯಾದ ರೋಟೆರಿಯನ್ ತ್ಯಾಗರಾಜ್ ಆಚಾರ್ಯರವರು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನಿತಾ ಗುರುರಾಜ್ ರವರು ಇಂಟರಾಕ್ಟ್ ಕ್ಲಬ್ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ ಕಳಕಳಿ, ಸಹಕಾರ ಮತ್ತು ಆತ್ಮವಿಶ್ವಾಸವನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂಟರಾಕ್ಟ್ ಕ್ಲಬ್ ಮೂಲಕ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉತ್ತಮ ನಾಗರಿಕರಾಗಿ ಭವ್ಯ ಭವಿಷ್ಯವನ್ನು ಕಂಡುಕೊಳ್ಳಬೇಕು ಎಂಬುದಾಗಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶಾಲೆಯ ಇಂಟರಾಕ್ಟ್ ವಿದ್ಯಾರ್ಥಿನಿ ಪ್ರತಿನಿಧಿ ಸಮಂತಾ ಪಿಂಟೋರವರು ಸ್ವಾಗತಿಸಿದರು. ಲಹರಿ ಶೆಟ್ಟಿ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ಅನನ್ಯರವರು ನಿರೂಪಿಸಿದರು.

Swarna- add
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments