HomeFresh Newsಉಡುಪಿ ಗ್ರಾಮೀಣ ಬಂಟರ ಸಂಘ ದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅ. 9 ರಂದು 5...

ಉಡುಪಿ ಗ್ರಾಮೀಣ ಬಂಟರ ಸಂಘ ದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅ. 9 ರಂದು 5 ನೇ ಬೃಹತ್ ಉದ್ಯೋಗ ಮೇಳ

ಉಡುಪಿ:ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ವತಿಯಿಂದ 5ನೇ ಉದ್ಯೋಗ ಮೇಳವು ಅಕ್ಟೋಬರ್ 9ರಂದು
ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕೌನ್ಸೆಲಿಂಗ್, ಪ್ಲೇಸ್‌ಮೆಂಟ್ ಮತ್ತು ತರಬೇತಿ ವಿಭಾಗದ ಸಹಯೋಗದಲ್ಲಿ ಹಾಗೂ ಎಂಆರ್‌ಜಿ ಗ್ರೂಪ್‌ನ ಪ್ರಾಯೋಜಕತ್ವದಲ್ಲಿ ಕುಂತಳ ನಗರ ದಲ್ಲಿ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯಲಿದೆ.

ಬೃಹತ್ ಉದ್ಯೋಗ ಮೇಳದ ಪೂರ್ವ ಸಿದ್ಧತೆಯ ಅಂಗವಾಗಿ ಇಂದು ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ತಂಡವು ಶ್ರೀ ಭರತ್ ಕುಮಾರ್ ಅವರ ನೇತೃತ್ವದಲ್ಲಿ ಸಂಘದ ಸ್ಕಿಲ್ ಡೆವಲಪ್‌ಮೆಂಟ್ ಕೇಂದ್ರಕ್ಕೆ ಭೇಟಿ ನೀಡಿ, ಉದ್ಯೋಗ ಮೇಳದ ಆಯೋಜನೆ, ಸಂಸ್ಥೆಗಳ ಭಾಗವಹಿಸುವಿಕೆ ಹಾಗೂ ಅಭ್ಯರ್ಥಿಗಳ ಸೌಲಭ್ಯಗಳ ಕುರಿತು ಪೂರ್ವಭಾವಿ ಸಭೆಯನ್ನು ನಡೆಸಿತು.
ಈ ಉದ್ಯೋಗ ಮೇಳವು ಗ್ರಾಮೀಣ ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ 5 ನೇ ಬಾರಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ವೇದಿಕೆಯಾಗಲಿದೆ
ಎಂದು ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಶೆಟ್ಟಿ ಯವರು ತಿಳಿಸಿದ್ದಾರೆ.

ಭರತ್ ಕುಮಾರ್ ಮಾತನಾಡಿ, ಈವರೆಗಿನ ಉದ್ಯೋಗ ಮೇಳಗಳಲ್ಲಿ ಭಾಗವಹಿಸಿದ 3500 ಅಭ್ಯರ್ಥಿಗಳು ವಿವಿಧ ಸಂಸ್ಥೆಗಳಲ್ಲಿ ಒಳ್ಳೆಯ ಉದ್ಯೋಗವನ್ನು ಪಡೆದುಕೊಂಡಿದ್ದಾರೆ, ಈ ಬಾರಿಯೂ ಒಳ್ಳೆಯ ಕಂಪನಿಗಳು ಬರುವ ರೀತಿಯಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಕೋಶಾಧಿಕಾರಿ ಶ್ರೀ ವಿಜಿತ್ ಕುಮಾರ್ ಶೆಟ್ಟಿ, ಟ್ರಸ್ಟಿ ಗಳಾದ ಶ್ರೀ ಪದ್ಮನಾಭ ಹೆಗ್ಡೆ ಮತ್ತು ಶ್ರೀಮತಿ ರಂಜನಿ ಹೆಗ್ಡೆ ಅವರು ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ತಂಡದವರೊಡನೆ ಉದ್ಯೋಗ ಮೇಳದ ಬಗ್ಗೆ ಸಮಾಲೋಚನೆ ನಡೆಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments