HomeUncategorizedಜಾನಪದ ಕಲಾವಿದ ಮೋಹನ್ ಹೊಸ್ಮಾರ್ ಗೆ ರಾಜ್ಯಮಟ್ಟದ "ಬೆಳಕು ಕರ್ನಾಟಕ ಶ್ರೇಷ್ಠತಾ ಪ್ರಶಸ್ತಿ"

ಜಾನಪದ ಕಲಾವಿದ ಮೋಹನ್ ಹೊಸ್ಮಾರ್ ಗೆ ರಾಜ್ಯಮಟ್ಟದ “ಬೆಳಕು ಕರ್ನಾಟಕ ಶ್ರೇಷ್ಠತಾ ಪ್ರಶಸ್ತಿ”

ಮೂಡುಬಿದಿರೆ : ಮೈಸೂರು ಜಿಲ್ಲೆಯ ಬೆಳಕು ಸೇವಾ ಫೌಂಡೇಶನ್ (ರಿ.) ವತಿಯಿಂದ ಪ್ರದಾನ ಮಾಡಲಾಗುವ ಪ್ರತಿಷ್ಠಿತ “ರಾಜ್ಯಮಟ್ಟದ ಬೆಳಕು ಕರ್ನಾಟಕ ಶ್ರೇಷ್ಠತಾ ಪ್ರಶಸ್ತಿ – 2026″*ಕ್ಕೆ ಮೂಡುಬಿದಿರೆಯ ಖ್ಯಾತ ಜಾನಪದ ಕಲಾವಿದ, ಶಿಕ್ಷಕ ಹಾಗೂ ಸಾಹಿತಿ ಶ್ರೀ ಮೋಹನ್ ಹೊಸ್ಮಾರ್ ಅವರು ಆಯ್ಕೆಯಾಗಿದ್ದಾರೆ.
ಕಲೆ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ವಿಶಿಷ್ಟ ಸೇವೆ, ಸಮಾಜಮುಖಿ ಕಾರ್ಯಗಳು ಮತ್ತು ನಿರಂತರ ಸಾಧನೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಜುಲೈ 19, 2026ರಂದು ತಿ. ನರಸೀಪುರ, ಮೈಸೂರು ಜಿಲ್ಲೆಯಲ್ಲಿ ನಡೆಯಲಿದೆ.
ಶ್ರೀ ಮೋಹನ್ ಹೊಸ್ಮಾರ್ ಅವರು ಜಾನಪದ ಕಲೆಯ ಸಂರಕ್ಷಣೆ ಮತ್ತು ಪೋಷಣೆಗೆ ಹಲವು ವರ್ಷಗಳಿಂದ ಅವಿರತವಾಗಿ ಶ್ರಮಿಸುತ್ತಿದ್ದಾರೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅನೇಕ ಪ್ರಶಸ್ತಿ-ಪುರಸ್ಕಾರಗಳನ್ನು ತಮ್ಮ ಮುಡಿಗೇರಿಸಿಕೊಂಡಿರುವ ಅವರು, ಕರ್ನಾಟಕದ ಶ್ರೀಮಂತ ಜಾನಪದ ಪರಂಪರೆಯನ್ನು ಯುವಪೀಳಿಗೆಗೆ ತಲುಪಿಸುವ ಕಾರ್ಯದಲ್ಲಿ ವಿಶೇಷ ಕೊಡುಗೆ ನೀಡಿದ್ದಾರೆ.


ವಿದ್ಯಾರ್ಥಿಗಳು ಹಾಗೂ ಯುವಜನಾಂಗಕ್ಕಾಗಿ ಜಾನಪದ ತರಗತಿಗಳು, ಕಾರ್ಯಾಗಾರಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿರುವ ಅವರು, ತುಳು ಹಾಗೂ ಕನ್ನಡ ಜಾನಪದ ಹಾಡುಗಳು, ಸಂದಿ, ಪಾರ್ದನ ಹಾಗೂ ಜಾನಪದ ಕ್ರೀಡೆಗಳನ್ನು ಪರಿಚಯಿಸಿ, ಪರಂಪರೆಯ ಮೌಲ್ಯಗಳನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಅವರು ಶ್ರೀ ಶಾರದಾ ನಾಟ್ಯಾಲಯ, ಮೂಡುಬಿದಿರೆ ಕಲಾಸಂಸ್ಥೆಯ ಸಂಸ್ಥಾಪಕ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು, ತಮ್ಮ ತಂಡದೊಂದಿಗೆ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿಯೂ ಜಾನಪದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನೀಡುತ್ತಿದ್ದಾರೆ.
ಇದರ ಜೊತೆಗೆ, ಕಳೆದ ಎಂಟು ವರ್ಷಗಳಿಂದ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಅವರು, ಶಿಕ್ಷಣ ಕ್ಷೇತ್ರದಲ್ಲಿಯೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ ಮತ್ತು ಸಾಂಸ್ಕೃತಿಕ ಮೌಲ್ಯಗಳ ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.
ಶ್ರೀ ಮೋಹನ್ ಹೊಸ್ಮಾರ್ ಅವರ ಈ ಸಾಧನೆ ಜಾನಪದ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂದ ಗೌರವವಾಗಿದೆ. ಜಾನಪದ ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗಾಗಿ ಅವರು ಕೈಗೊಂಡಿರುವ ಕಾರ್ಯಗಳು ಇನ್ನಷ್ಟು ವಿಸ್ತಾರವಾಗಲಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡುವಂತಾಗಲಿ.

Swarna- add
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments