ಬಂಟ್ವಾಳ: ಯುವತಿಯೊಬ್ಬಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಆರೋಪಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ದುರ್ದೈವಿಯಾಗಿದ್ದು, ಕೃತ್ಯ ನಡೆಸಿದ ಆರೋಪಿ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ್ ಗ್ರಾಮದ ನಿವಾಸಿ ಚೇತನ್ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಆತ ಯುವತಿಯ ದೂರದ ಸಂಬಂಧಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಯು ಯುವತಿಯನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


