ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ, ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಹಾಗೂ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಹಯೋಗದಲ್ಲಿ, ಎಂಆರ್ಜಿ ಗ್ರೂಪ್ ಪ್ರಾಯೋಜಕತ್ವದ 5ನೇ ಮೆಗಾ ಜಾಬ್ ಫೇರ್ ಮತ್ತು ಸ್ಟಡಿ ಅಬ್ರಾಡ್ ಎಕ್ಸ್ಪೋ 2026ರ ಅಕ್ಟೋಬರ್ 9, ಶುಕ್ರವಾರ ಬೆಳಿಗ್ಗೆ 9:30ರಿಂದ ಉಡುಪಿಯ ಕುಂತಳನಗರದಲ್ಲಿರುವ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸೆಂಟರ್ನ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ನಡೆಯಲಿದೆ.
ಇಂಜಿನಿಯರಿಂಗ್ ಹಾಗೂ ಇತರೆ ಪದವೀಧರರು, ಎಂಬಿಎ, ಡಿಪ್ಲೊಮಾ, ಐಟಿಐ ಮತ್ತು ಪಿಯುಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅವಕಾಶವಿದೆ.
ಮೇಳದ ಪ್ರಮುಖ ಆಕರ್ಷಣೆಗಳಾಗಿ 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳ ಭಾಗವಹಿಸುವಿಕೆ, 2,500ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಹಾಗೂ ಸ್ಥಳದಲ್ಲೇ ಸಂದರ್ಶನ (On-the-Spot Interviews) ನಡೆಯಲಿವೆ.
ಉದ್ಯೋಗಾಕಾಂಕ್ಷಿಗಳು ತಮ್ಮ ಬಯೋಡೇಟಾ, ಶೈಕ್ಷಣಿಕ ದಾಖಲೆಗಳು ಹಾಗೂ ಅಗತ್ಯ ಪ್ರಮಾಣಪತ್ರಗಳೊಂದಿಗೆ ಭಾಗವಹಿಸಿ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳುವಂತೆ ಸಂಘದ ಪ್ರಕಟಣೆ ತಿಳಿಸಿದೆ.


