ಕಾಪು: ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ಮತ್ತು ನಾಳೆ ವಿಶೇಷ ಮತದಾರ ಪರಿಷ್ಕರಣೆ (SIR) ಮಹಾ ಅಭಿಯಾನ ನಡೆಯುತ್ತಿದೆ.

ಅಭಿಯಾನದ ಅಂಗವಾಗಿ ಇಂದು (ಆ. 18) ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಪುರಸಭೆ ವ್ಯಾಪ್ತಿಯ ಭಾರತ್ ನಗರ ವಾರ್ಡ್ನ ಬೂತ್ ಸಂಖ್ಯೆ 139, ಜನಾರ್ಧನ ವಾರ್ಡ್ನ ಬೂತ್ ಸಂಖ್ಯೆ 138 ಹಾಗೂ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 177ರ ವ್ಯಾಪ್ತಿಯಲ್ಲಿ ಮನೆ-ಮನೆಗೆ ಭೇಟಿ ನೀಡಿ ಮತದಾರರೊಂದಿಗೆ ಸಂವಾದ ನಡೆಸಿದರು. ಅಲ್ಲದೆ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಪು ಪುರಸಭೆ ಸದಸ್ಯರಾದ ಸುರೇಶ್ ದೇವಾಡಿಗ, ಲತಾ ದೇವಾಡಿಗ, ಹರೀಣಾಕ್ಷಿ ದೇವಾಡಿಗ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


