HomeFresh Newsಕುತ್ಯಾರು, ಬಡಗುಬೆಟ್ಟು ಹಾಗೂ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಶೇಷ ಮತದಾರ ಪರಿಷ್ಕರಣೆ (SIR) ಮಹಾ...

ಕುತ್ಯಾರು, ಬಡಗುಬೆಟ್ಟು ಹಾಗೂ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಶೇಷ ಮತದಾರ ಪರಿಷ್ಕರಣೆ (SIR) ಮಹಾ ಅಭಿಯಾನ

ಕಾಪು: ಕಾಪು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಶೇಷ ಮತದಾರ ಪರಿಷ್ಕರಣೆ (SIR) ಮಹಾ ಅಭಿಯಾನದ ಅಂಗವಾಗಿ ಬುಧವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕುತ್ಯಾರು, 80 ಬಡಗುಬೆಟ್ಟು ಹಾಗೂ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮನೆ-ಮನೆಗೆ ತೆರಳಿ ಮತದಾರ ಪರಿಷ್ಕರಣೆ ಕಾರ್ಯದ ಕುರಿತು ಮಾಹಿತಿ ಪಡೆದು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಶಾಸಕರು ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 157, 80 ಬಡಗುಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 37 ಹಾಗೂ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 9ಕ್ಕೆ ಭೇಟಿ ನೀಡಿ ಅಭಿಯಾನದ ಪ್ರಾಮುಖ್ಯತೆಯನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗಣೇಶ್ ಶೆಟ್ಟಿ ಪೈಯಾರು, 80 ಬಡಗುಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಕೋಟ್ಯಾನ್, ಶುಭಕರ್ ಶೆಟ್ಟಿ, ಜ್ಯೋತಿ ಡಿ. ಪ್ರಭು, ಪೆರ್ಡೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ದೇವು ಪೂಜಾರಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments