ಕಾಪು: ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ವಿದ್ಯಾಕುಮಾರಿ ಐಎಎಸ್ ಅವರು ಪ್ರಸ್ತುತ ಕರ್ನಾಟಕ ರಾಜ್ಯದ ಸಮಗ್ರ ಶಿಕ್ಷಣ ಇಲಾಖೆಯ ಯೋಜನಾ ನಿರ್ದೇಶಕರಾಗಿ ಬಡ್ತಿ ಹೊಂದಿದ್ದು, ಜುಲೈ 19ರಂದು ದಂಪತಿ ಸಮೇತರಾಗಿ ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿಯವರೊಂದಿಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಅವರು ದೇವಿಯ ಅನುಗ್ರಹ ಪ್ರಸಾದ ನೀಡಿ ಆಶೀರ್ವದಿಸಿದರು.
ಬಳಿಕ ದೇವಸ್ಥಾನದ ಅಭಿವೃದ್ಧಿ ಸಮಿತಿ ಹಾಗೂ ವ್ಯವಸ್ಥಾಪನಾ ಸಮಿತಿ ವತಿಯಿಂದ ಡಾ. ವಿದ್ಯಾಕುಮಾರಿ ಐಎಎಸ್ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಸದಸ್ಯ ಮಾಧವ ಪಾಲನ್, ನವದುರ್ಗಾ ಲೇಖನ ಯಜ್ಞ ಸಮಿತಿ ಕೋಶಾಧಿಕಾರಿ ಸುನಿಲ್ ಎಸ್. ಪೂಜಾರಿ, ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಇತರರು ಉಪಸ್ಥಿತರಿದ್ದರು.


