HomeUncategorizedಶಾಸಕರಿಂದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ – ವಿವಿಧ ಸವಲತ್ತುಗಳ ವಿತರಣೆ

ಶಾಸಕರಿಂದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ – ವಿವಿಧ ಸವಲತ್ತುಗಳ ವಿತರಣೆ

ಕಾಪು, ಜು. 21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಸೋಮವಾರ ಬಡಾ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಂದ ವಿವಿಧ ಸಾರ್ವಜನಿಕ ಸಮಸ್ಯೆಗಳು ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಂಬಂಧಿಸಿದ ಅಧಿಕಾರಿಗಳಿಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಸರ್ಕಾರದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರ್ ಅನಂತ ಶಂಕರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ವಿಜಯ ಕುಮಾರ್, ಪಂಚಾಯತ್ ಆಡಳಿತಾಧಿಕಾರಿ ಭಾನು ಪ್ರಕಾಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments