ಕಲ್ಲುಗುಂಡಿಯ ಕಡೆಪಾಲದ ವಿವಾಹಿತ ಮಹಿಳೆ ಫಾತಿಮತ್ ನಿಶಾನ ಅನುಮಾನಾಸ್ಪದ ಮೃತ್ಯು ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಮೃತ ಮಹಿಳೆಯ ಮಾವ ಸಿಪಿ ಅಲವಿ (54), ಅತ್ತೆ ಅಯಿಷಾ ಸಿಎ ಹಾಗೂ ನಾದಿನಿ ಫಸಿಲಾ ಸಿಎ (29) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.ಮೃತ ಮಹಿಳೆಯ ತಾಯಿ ನೀಡಿದ ದೂರಿನಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


