HomeFresh Newsಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಅಧೀನ ಶಾಸನ ರಚನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಅಧೀನ ಶಾಸನ ರಚನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರ ಭೇಟಿ

ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ಕರ್ನಾಟಕ ವಿಧಾನ ಪರಿಷತ್ (MLC) ಸದಸ್ಯ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಟಿ.ಎ. ಶರವಣ, ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಗುಬ್ಬಿ ಶ್ರೀನಿವಾಸ್ (ವಾಸು), ಧಾರವಾಡ ಜಿಲ್ಲೆಯ ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್. ಕೋನರೆಡ್ಡಿ ಅವರು ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಆಗಮಿಸಿದ್ದರು. ಅವರೊಂದಿಗೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಅವರು ವಿಶೇಷ ಪೂಜೆ ನೆರವೇರಿಸಿ ದೇವಿಯ ಅನುಗ್ರಹ ಪ್ರಸಾದವನ್ನು ವಿತರಿಸಿದರು.
ಬಳಿಕ ದೇವಳದ ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿ ವತಿಯಿಂದ ಆಗಮಿಸಿದ ಗಣ್ಯರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗಿಶ್ ವಿ. ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ ಸಾಲ್ಯಾನ್, ಮಾಧವ ಆರ್. ಪಾಲನ್, ಹುಬ್ಬಳ್ಳಿ–ಧಾರವಾಡ ಸಮಿತಿಯ ಪ್ರಧಾನ ಸಂಚಾಲಕ ಸುಗ್ಗಿ ಸುಧಾಕರ್ ಶೆಟ್ಟಿ, ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Swarna- add
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments