HomeFresh Newsಶಾಸಕರಿಂದ ಆತ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ – ವಿವಿಧ ಸವಲತ್ತುಗಳ ವಿತರಣೆ,...

ಶಾಸಕರಿಂದ ಆತ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ – ವಿವಿಧ ಸವಲತ್ತುಗಳ ವಿತರಣೆ, ರಸ್ತೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

ಉಡುಪಿ : ಆತ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ, ವಿವಿಧ ಸವಲತ್ತುಗಳ ವಿತರಣೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಸೋಮವಾರ ಆತ್ರಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪಂಚಾಯತ್‌ನ 25 ಶೇಕಡಾ ಅನುದಾನದಡಿ 14 ಫಲಾನುಭವಿಗಳಿಗೆ ವೈದ್ಯಕೀಯ ಸಹಾಯಧನ, 4 ಫಲಾನುಭವಿಗಳಿಗೆ ಕೌಶಲ್ಯಾಭಿವೃದ್ಧಿ ಸಹಾಯಧನ ಹಾಗೂ 2 ಫಲಾನುಭವಿಗಳಿಗೆ ಶವಸಂಸ್ಕಾರ ಸಹಾಯಧನ ವಿತರಿಸಲಾಯಿತು. ಇದೇ ವೇಳೆ 5 ಶೇಕಡಾ ಅನುದಾನದಡಿ 20 ಮಂದಿ ವಿಕಲಚೇತನ ಫಲಾನುಭವಿಗಳಿಗೆ ಸಹಾಯಧನ ವಿತರಣೆ ಮಾಡಲಾಯಿತು.


ಇದೇ ಸಂದರ್ಭದಲ್ಲಿ ಶಾಸಕರ ಶಿಫಾರಸ್ಸಿನ ಮೇರೆಗೆ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾದ ಅನುದಾನದಿಂದ ಪೂರ್ಣಗೊಂಡ ಕಾಮಗಾರಿಗಳನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಉಡುಪಿ ತಹಶೀಲ್ದಾರ್ ಗುರುರಾಜ್, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವಿಜಯ, ಆತ್ರಾಡಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಸಂದೀಪ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿದ್ದೇಶ್, ಗ್ರಾಮ ಆಡಳಿತಾಧಿಕಾರಿ ಸುಮಿತ್ರಾ, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Home interiors
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments