HomeFresh Newsಬರಿಮಾರು ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ: ಶಾಲಾ ಬಸ್‌ಗಳ ಸುರಕ್ಷತೆಗೆ ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮ

ಬರಿಮಾರು ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ: ಶಾಲಾ ಬಸ್‌ಗಳ ಸುರಕ್ಷತೆಗೆ ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮ

ಬಿ.ಸಿ.ರೋಡ್ ವೃತ್ತದ ಬಳಿ ಬಂಟ್ವಾಳ ನಗರ ಪೊಲೀಸರು ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ (ಆರ್‌ಟಿಒ) ಅಧಿಕಾರಿಗಳು ಜಂಟಿಯಾಗಿ ಶಾಲಾ ಬಸ್‌ಗಳ ತಪಾಸಣೆಯನ್ನು ಸೋಮವಾರ ನಡೆಸಿದರು.


ಕೆಲವು ಶಾಲಾ ಬಸ್‌ಗಳ ದಾಖಲೆಗಳು ಸಮರ್ಪಕವಾಗಿಲ್ಲದಿರುವುದು ಹಾಗೂ ನಿಯಮ ಉಲ್ಲಂಘನೆಗಳು ಕಂಡುಬಂದ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಬಸ್‌ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.


ಬಂಟ್ವಾಳ ಆರ್ ಟಿಒ ವ್ಯಾಪ್ತಿಯಲ್ಲಿ ಜನವರಿಯಿಂದಲೇ ಶಾಲಾ ಬಸ್ ಗಳ ದಾಖಲೆ ಪರಿಶೀಲನೆ ಹಂತ ಹಂತವಾಗಿ ನಡೆಯುತ್ತಿದೆ. ಅದರಂತೆ ಕೆಲವು ಶಾಲೆಗಳ ಮುಖ್ಯಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ. 46 ಶಾಲಾ ವಾಹನದ ಮೇಲೆ ಇಲ್ಲಿಯವರೆಗೆ ದಂಡ ವಿಧಿಸಲಾಗಿತ್ತು. ಇದೀಗ ಈ ಕಾರ್ಯಾಚರಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಲಾಗುತ್ತಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡುವ ಉದ್ದೇಶದಿಂದ ಇಂತಹ ತಪಾಸಣೆ ಮತ್ತು ಕಾನೂನು ಕ್ರಮಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Home interiors
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments