HomeFresh Newsಬಿ.ಸಿ. ರೋಡ್‌ನಲ್ಲಿ ನಡೆದಿದ್ದ ಯುವತಿಯ ಹ*ತ್ಯೆ ಪ್ರಕರಣ:11 ದಿನಗಳ ಬಳಿಕ ಆರೋಪಿ ಪೊಲೀಸ್ ವಶಕ್ಕೆ

ಬಿ.ಸಿ. ರೋಡ್‌ನಲ್ಲಿ ನಡೆದಿದ್ದ ಯುವತಿಯ ಹ*ತ್ಯೆ ಪ್ರಕರಣ:11 ದಿನಗಳ ಬಳಿಕ ಆರೋಪಿ ಪೊಲೀಸ್ ವಶಕ್ಕೆ

ಬಂಟ್ವಾಳ: ಬಿ.ಸಿ ರೋಡ್ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸಿನಲ್ಲಿ ಕುಳಿತಿದ್ದ ಕಕ್ಕೆಪದವು ಕೊಡಂಗೆ ನಿವಾಸಿ ಲಾವಣ್ಯ ಗೌಡಳನ್ನು ಜು.16 ರಂದು ಅಟ್ಟಾಡಿಸಿ ಹತ್ಯೆ ಮಾಡಿದ ಆರೋಪಿ ಚೇತನ್ ಗೌಡ ಮಂಗಳೂರು ಸರಕಾರಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆಯ ಬಳಿಕ ಆರೋಪಿಯ ಬಂದಧನವಾಗಿದ್ದರೂ ಇಲಿ ಪಾಷಣ ಸೇವಿಸಿದ ಹಿನ್ನಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ ಹಿನ್ನೆಲೆಯಲ್ಲಿ ಸೋಮವಾರ ಬಂಟ್ವಾಳ ನಗರ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಲಾವಣ್ಯ ಹತ್ಯೆಯ ಬಳಿಕ ಆರೋಪಿ ಚೇತನ್ ಪರಾರಿಯಾಗಿದ್ದ. ಘಟನೆಯ ಮರುದಿನ ಮಂಗಳೂರು ಹೊರವಲಯದ ವಾಮಂಜೂರು ಬಳಿಯ ಪಚ್ಚನಾಡಿ ಪ್ರದೇಶದಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. .ಆತ ಇಲಿಪಾಷಾಣ ಸೇವಿಸಿದ್ದ ಕಾರಣ ಆರಂಭದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ನಂತರ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ವೆನ್ಲಾಕ್ ಆಸ್ಪತ್ರೆಯಲ್ಲಿ ಆರಂಭದಲ್ಲಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಬಳಿಕ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಕಳೆದ 11 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ ಹಿನ್ನೆಲೆಯಲ್ಲಿ, ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಸೋಮವಾರ ಬಂಟ್ವಾಳ ನಗರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಬಂಧನಕ್ಕೆ ಸಂಬಂಧಿಸಿದ ಕ್ರಮಗಳನ್ನು ಪೂರ್ಣಗೊಳಿಸಿದ ಬಳಿಕ ನ್ಯಾಯಾಲಯದ ಮುಂದೆ ಆತನನ್ನು ಹಾಜರುಪಡಿಸುವ ಸಾಧ್ಯತೆ ಇದೆ. ಬಂಟ್ವಾಳ ಎ.ಎಸ್.ಪಿ ಯಶ್ ಕುಮಾರ್ ಶರ್ಮ ಅವರ ನಿರ್ದೇಶನದಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಅವರ ನೇತ್ರತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

Home interiors
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments