HomeFresh Newsಮೀನುಗಾರ ಮುಖಂಡ ಗಂಗಾಧರ ಪಾಂಗಳ ಕೊ*ಲೆ ಪ್ರಕರಣ-ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

ಮೀನುಗಾರ ಮುಖಂಡ ಗಂಗಾಧರ ಪಾಂಗಳ ಕೊ*ಲೆ ಪ್ರಕರಣ-ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

ಮಂಗಳೂರು: ನಗರ ಹೊರವಲಯದ ಬೈಕಂಪಾಡಿಯ ಮೀನಕಳಿಯ ಬಳಿ 12 ವರ್ಷಗಳ ಹಿಂದೆ ಮೀನುಗಾರ ಮುಖಂಡ ಗಂಗಾಧರ ಪಾಂಗಳ (55) ಎಂಬವರನ್ನು ವಾಹನ ಢಿಕ್ಕಿ ಪಡಿಸಿ ಕೊಲೆ ಮಾಡಿದ ಪ್ರಕರಣದ ನಾಲ್ಕು ಮಂದಿ ಆರೋಪಿಗಳಿಗೆ ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಸತೀಶ್ ಬೈಕಂಪಾಡಿ (58), ಹರೀಶ್ ಬೈಕಂಪಾಡಿ (60), ಭಾಸ್ಕರ್ ಬೈಕಂಪಾಡಿ (61) ಪುಷ್ಪರಾಜ್ (47) ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು ಎಂದು ತಿಳಿದುಬಂದಿದೆ.

ಬೈಕಂಪಾಡಿಯ ಮೊಗವೀರ ಮಹಾಸಭಾದ ಅಧ್ಯಕ್ಷರಾಗಿದ್ದ ಸತೀಶ್ ಬೈಕಂಪಾಡಿಯು ಮೀನಕಳಿಯದ ಗೋಪಾಲ ಕೃಷ್ಣ ಭಜನಾ ಮಂದಿರದ ಪುನಃ ನಿರ್ಮಾಣ ಕಾರ್ಯ ಮತ್ತು ಹೈಸ್ಕೂಲ್ ಕಟ್ಟಡದ ನಿರ್ಮಾಣ ಕಾರ್ಯಗಳ ಅಧ್ಯಕ್ಷರೂ ಆಗಿದ್ದರು. ಸತೀಶ್ ಬೈಕಂಪಾಡಿ ಮತ್ತು ಭಾಸ್ಕರ್ ಸೇರಿ ಅದರ ವಂತಿಗೆ ಹಣವನ್ನು ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿ ಮೊಗವೀರ ಮಹಾ ಸಭಾದ ಸದಸ್ಯತ್ವದಿಂದ ಅಮಾನತು ಪಡಿಸಲು ಕಾರಣರಾಗಿದ್ದಾರೆ ಎಂದು ಗಂಗಾಧರ ಪಾಂಗಳ ಮೇಲೆ ದ್ವೇಷ ಸಾಧಿಸಿದ್ದರು ಎಂದು ಆರೋಪಿಸಲಾಗಿತ್ತು.

Home interiors
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments