ಕಾಮನ್‌ವೆಲ್ತ್ ಗೇಮ್ಸ್‌ನ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಭಾರತವು ಐತಿಹಾಸಿಕ ಸಾಧನೆ ಮಾಡಿದೆ. ಪುರುಷರ ಟಿ47 ವಿಭಾಗದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಮೊದಲೆರಡು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ದಿಲೀಪ್ ಮಹದೂ ಗಾವಿತ್ ಚಿನ್ನ ಗೆದ್ದರೆ, ಮೊಹಮ್ಮದ್ ಬಸಿಲ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.
ದಿಲೀಪ್ ಅವರು 10.71 ಸೆಕೆಂಡುಗಳಲ್ಲಿ ಗುರಿ ತಲುಪಿ ಅಗ್ರಸ್ಥಾನ ಪಡೆದ್ದರೆ, ಮೊಹಮ್ಮದ್ ಬಸಿಲ್ 10.83 ಸೆಕೆಂಡುಗಳಲ್ಲಿ ಗುರಿ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತ, ಇಂಗ್ಲೆಂಡ್‌ನ ಕೆವಿನ್ ಸ್ಯಾಂಟೋಸ್ 10.85 ಸೆಕೆಂಡುಗಳಲ್ಲಿ ಗುರಿ ತಲುಪಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಕಾಮನ್‌ವೆಲ್ತ್ ಗೇಮ್ಸ್‌ನ ಲಾಂಗ್ ಜಂಪ್ ಸ್ಪರ್ಧೆಯಲ್ಲಿ 28 ವರ್ಷದ ಮುರಳಿ ಶ್ರೀಶಂಕರ್ 8.09 ಮೀಟರ್ ದೂರ ಜಿಗಿಯುವ ಮೂಲಕ ಸತತ ಎರಡನೇ ಬಾರಿಗೆ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ.
ಕಾಮನ್‌ವೆಲ್ತ್ ಗೇಮ್ಸ್‌ನ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಸತತ ಎರಡು ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಶ್ರೀಶಂಕರ್ ಪಾತ್ರರಾಗಿದ್ದಾರೆ. 2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿಯೂ ಬೆಳ್ಳಿ ಗೆದ್ದಿದ್ದರು. ಈಗ ಮತ್ತೊಮ್ಮೆ ಅದ್ಭುತ ಪ್ರದರ್ಶನ ನೀಡಿದ್ದಾರೆ.


