ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಕೊನೆಗೂ ಪತ್ತೆಯಾಗಿದೆ.
ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ನಿವಾಸಿಯಾಗಿದ್ದ ಜೀವನ್ ಪಿಂಟೋ ಎಂಬುವರ ಮೃ*ತದೇಹ ಇಂದು ಸಂಗಬೆಟ್ಟುವಿನಲ್ಲಿ ಪತ್ತೆಯಾಗಿದೆ. ಎನ್ಡಿಆರ್ಎಫ್ ತಂಡ ನಡೆಸಿದ ಸುದೀರ್ಘ ಶೋಧ ಕಾರ್ಯಾಚರಣೆಯ ಬಳಿಕ ಮೃ*ತದೇಹವನ್ನು ಹೊರತೆಗೆಯಲಾಗಿದೆ.”
ಬಂಟ್ವಾಳದ ರಾಯಿ ಗ್ರಾಮದ ನಿವಾಸಿ ಜೀವನ್ ಪಿಂಟೋ ಅವರು ಇತ್ತೀಚೆಗೆ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ಸ್ಥಳೀಯರು ನಿರಂತರ ಶೋಧ ಕಾರ್ಯ ಕೈಗೊಂಡಿದ್ದರು.ಇಂದು ಸಂಗಬೆಟ್ಟು ಪ್ರದೇಶದಲ್ಲಿ ಎನ್ಡಿಆರ್ಎಫ್ ಸಿಬ್ಬಂದಿ ಮೃತದೇಹವನ್ನು ಗುರುತಿಸಿ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.


