ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು ಸ್ಕೂಲ್ ಆಫ್ ಚೆಸ್ ಕಾಪು ಮತ್ತು ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಜಂಟಿ ಸಹಯೋಗದೊಂದಿಗೆ ಆ. 9ರಂದು ಕಾಪು ಶ್ರೀ ಹಳೆ ಮಾರಿಯಮ್ಮ ಸಭಾಭವನದಲ್ಲಿ ಯುವವಾಹಿನಿ ಟ್ರೋಫಿ–2026′ ಮುಕ್ತ ಹಾಗೂ ವಯೋಮಿತಿ ವಿಭಾಗದ ರ್ಯಾಪಿಡ್ ಚೆಸ್ ಪಂದ್ಯಾವಳಿ ನಡೆಯಲಿದೆ.
ಪಂದ್ಯಾವಳಿಯಲ್ಲಿ ಒಟ್ಟು 30,303 ರೂ. ನಗದು ಬಹುಮಾನ ಹಾಗೂ 128 ಟ್ರೋಫಿಗಳನ್ನು ವಿಜೇತರಿಗೆ ವಿತರಿಸಲಾಗುವುದು. ಓಪನ್ ಹಾಗೂ ವಿವಿಧ ವಯೋಮಿತಿ ವಿಭಾಗಗಳಲ್ಲಿ ತಲಾ 20 ಬಹುಮಾನಗಳನ್ನು ಘೋಷಿಸಲಾಗಿದೆ. ಸ್ಪರ್ಧಾಳುಗಳು ಹಾಗೂ ಅವರ ಪೋಷಕರಿಗೆ ಉಚಿತ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.
ಚದುರಂಗ ಕ್ರೀಡೆಯನ್ನು ಉತ್ತೇಜಿಸುವ ಹಾಗೂ ಪ್ರತಿಭಾವಂತ ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಈ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
ಜಿಲ್ಲೆಯ ವಿವಿಧ ಭಾಗಗಳಿಂದ ಹಾಗೂ ರಾಜ್ಯದ ವಿವಿಧೆಡೆಗಳಿಂದ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆಯಿದೆ.
ಆಸಕ್ತರು https://www.chessfee.com ಮೂಲಕ ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಮಕ್ಕಳಿಗೆ ಸ್ಪರ್ಧಾತ್ಮಕ ಅನುಭವ ಹಾಗೂ ಪ್ರತಿಭೆ ಪ್ರದರ್ಶಿಸಲು ಇದು ಉತ್ತಮ ಅವಕಾಶವಾಗಿದ್ದು, ಶೀಘ್ರ ನೋಂದಣಿ ಮಾಡಿಕೊಳ್ಳುವಂತೆ ಯುವವಾಹಿನಿ ಕಾಪು ಘಟಕದ ಪ್ರಕಟಣೆ ತಿಳಿಸಿದೆ.


