ಬೆಂಗಳೂರು: ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಶ್ರೀ ರಿಜ್ವಾನ್ ಹರ್ಷದ್ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಕಾಂಗ್ರೆಸ್ ಮುಖಂಡರು ಭೇಟಿ ಮಾಡಿ ಶುಭಾಶಯ ಕೋರಿದರು.
ಈ ವೇಳೆ ಸಚಿವರಾಗಿ ಅವರ ಜನಪರ ಕಾರ್ಯಚಟುವಟಿಕೆಗಳು ಯಶಸ್ವಿಯಾಗಿ ಸಾಗಲಿ ಹಾಗೂ ರಾಜ್ಯದ ಅಭಿವೃದ್ಧಿಗೆ ಅವರ ಸೇವೆ ಮತ್ತಷ್ಟು ಫಲಪ್ರದವಾಗಲಿ ಎಂದು ಹಾರೈಸಲಾಯಿತು.
ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷರಾದ ವೈ. ಸುಕುಮಾರ್, ಕೆಪಿಸಿಸಿ ಕೋಆರ್ಡಿನೇಟರ್ಗಳಾದ ನವೀನ್ ಚಂದ್ರ ಜೆ. ಶೆಟ್ಟಿ ಹಾಗೂ ಅಬ್ದುಲ್ ಅಜೀಜ್ ಹೆಜಮಾಡಿ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪ್ರಭೋದ್ ಚಂದ್ರ ಹೆಜಮಾಡಿ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೀಜ್ ಹುಸೇನ್, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ನಿಯಾಜ್ ಹಾಗೂ ಕಾಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೇಶವ್ ಸಿ. ಸಾಲ್ಯಾನ್ ಉಪಸ್ಥಿತರಿದ್ದರು.


