HomeFresh Newsಆ.9ರಂದು 'ಆಟಿ ತಿಂಗಳ ಭೂತಾರಾಧನೆ' : ಸಾಕ್ಷ್ಯ ಚಿತ್ರ ಪ್ರದರ್ಶನ ಹಾಗೂ ಸಂವಾದ

ಆ.9ರಂದು ‘ಆಟಿ ತಿಂಗಳ ಭೂತಾರಾಧನೆ’ : ಸಾಕ್ಷ್ಯ ಚಿತ್ರ ಪ್ರದರ್ಶನ ಹಾಗೂ ಸಂವಾದ

ಮಂಜೇಶ್ವರ : ತುಳುನಾಡಿನ ವಿವಿಧೆಡೆ ಆಂಟಿ ತಿಂಗಳಲ್ಲಿ ನಡೆಯುವ ಭೂತಾರಾಧನೆ ಬಗ್ಗೆ ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮ ಆ.9 ರಂದು ಬೆಳಿಗ್ಗೆ 10.00ಕ್ಕೆ ಮಂಜೇಶ್ವರ ಉದ್ಯಾವರ ಮಾಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಉದ್ಯಾವರ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ರಾಧಾಕೃಷ್ಣ ಅವರು ಉದ್ಘಾಟಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಕಾಸರಗೋಡು ಸರ್ಕಾರಿ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಬಾಲಕೃಷ್ಣ ಬಿ.ಎಂ. ಭಾಗವಹಿಸುವರು. ಮುಖ್ಯ ಅತಿಥಿಯಾಗಿ ಪುಸ್ತಕ ಪ್ರೇಮಿ ಸುರೇಂದ್ರ ಮಾಡ ಭಾಗವಹಿಸುವರು, ಸಾಕ್ಷ್ಯ ಚಿತ್ರದ ನಿರ್ದೇಶಕ ರಮೇಶ್ ಮಂಜೇಶ್ವರ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Sudha Interior new 1
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments