HomeFresh Newsಉಡುಪಿ–ಉಚ್ಚಿಲ ದಸರಾ -2026 ಪಂಚಮ ವರ್ಷದ ಅದ್ಧೂರಿ ಆಚರಣೆಗೆ ಪೂರ್ವಭಾವಿ ಸಭೆ

ಉಡುಪಿ–ಉಚ್ಚಿಲ ದಸರಾ -2026 ಪಂಚಮ ವರ್ಷದ ಅದ್ಧೂರಿ ಆಚರಣೆಗೆ ಪೂರ್ವಭಾವಿ ಸಭೆ

ಉಚ್ಚಿಲ: ಭಕ್ತರು, ದಾನಿಗಳು ಹಾಗೂ ಸಮಾಜದ ಸರ್ವರ ಸಹಕಾರದೊಂದಿಗೆ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026 ಅನ್ನು ಈ ಬಾರಿ ಅತ್ಯಂತ ಶಿಸ್ತುಬದ್ಧವಾಗಿ, ಅಚ್ಚುಕಟ್ಟಾಗಿ ಹಾಗೂ ವೈಭವೋಪೇತವಾಗಿ ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್ ಹೇಳಿದರು.
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ ಉಡುಪಿ–ಉಚ್ಚಿಲ ದಸರಾ ಸಮಿತಿಯ ಸರ್ವ ಸಮಿತಿಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಳೆದ ನಾಲ್ಕು ವರ್ಷಗಳಿಂದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರು ಹಾಗೂ ದಾನಿಗಳ ಸಹಕಾರದಿಂದ ದಸರಾ ಉತ್ಸವವನ್ನು ಯಶಸ್ವಿಯಾಗಿ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಉತ್ಸವವು ದೇಶ-ವಿದೇಶಗಳ ಭಕ್ತರ ಗಮನ ಸೆಳೆಯುತ್ತಿದ್ದು, ಪಂಚಮ ವರ್ಷದ ದಸರಾ ಉತ್ಸವವನ್ನು ಇನ್ನಷ್ಟು ವೈಭವಯುತವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ನಿರ್ಧರಿಸಲಾಗಿದೆ ಎಂದು ಡಾ. ಜಿ. ಶಂಕರ್ ತಿಳಿಸಿದರು.


ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ
ಈ ಬಾರಿಯ ದಸರಾ ಉತ್ಸವದಲ್ಲಿ ನಿತ್ಯ ಚಂಡಿಕಾಯಾಗ, ನಿತ್ಯ ಸಾಮೂಹಿಕ ಕುಂಕುಮಾರ್ಚನೆ, ಕಲ್ಪೋಕ್ತ ಪೂಜೆ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಇದರೊಂದಿಗೆ ವೈಭವೋಪೇತ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಶಿಷ್ಟ ವಸ್ತುಪ್ರದರ್ಶನ, ವಿದ್ಯುದ್ದೀಪಾಲಂಕಾರ, ನಿತ್ಯ ಅನ್ನಸಂತರ್ಪಣೆ ಹಾಗೂ ಸಂಜೆ ಉಪಹಾರದ ವ್ಯವಸ್ಥೆಯೂ ಇರಲಿದೆ.


ವಿಶೇಷವಾಗಿ ರಂಗೋಲಿ ಸ್ಪರ್ಧೆ, ಮಕ್ಕಳಿಗಾಗಿ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಹುಲಿಕುಣಿತ ಸ್ಪರ್ಧೆ, ಕುಣಿತ ಭಜನೆ ಹಾಗೂ ಸಾಮೂಹಿಕ ದಾಂಡಿಯಾ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.
ಶ್ರೀ ಮಹಾಲಕ್ಷ್ಮೀ ಅಮ್ಮನವರ ಸಾನಿಧ್ಯದಲ್ಲಿ ಶ್ರೀ ಶಾರದಾ ಮಾತೆಯ ಸಹಿತ ನವದುರ್ಗೆಯರ ಆರಾಧನೆಯನ್ನು ಅತ್ಯಂತ ಭಕ್ತಿಪೂರ್ವಕವಾಗಿ ನೆರವೇರಿಸಲಾಗುವುದು. ದಸರಾ ಉತ್ಸವದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲು ಭಗವದ್ಭಕ್ತರು, ದಾನಿಗಳು ಹಾಗೂ ಸರ್ವರ ಸಹಕಾರ ಅಗತ್ಯವಾಗಿದ್ದು, ಎಲ್ಲರೂ ಸಹಕರಿಸುವಂತೆ ಡಾ. ಜಿ. ಶಂಕರ್ ಮನವಿ ಮಾಡಿದರು.

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ.), ಉಚ್ಚಿಲ ಇದರ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಮಾತನಾಡಿ, ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾವನ್ನು ಮೈಸೂರಿನ ದಸರದಂತೆ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಪೂರ್ವಭಾವಿ ಸಭೆಯನ್ನು ಕರೆದು ಎಲ್ಲರ ಒಮ್ಮತದ ನಿರ್ಧಾರ ಮೇರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಈ ವರ್ಷದ ದಸರಾ ಉತ್ಸವವನ್ನು ಅದ್ದೂರಿಯಾಗಿ ನಡೆಸಲಿದ್ದೇವೆ.ಉಡುಪಿ -ಉಚ್ಚಿಲ ದಸರ ಮಹೋತ್ಸವಕ್ಕೆಸರ್ವರು ಸಹಕಾರ ನೀಡುವಂತೆ ಮನವಿ ಮಾಡಿದರು.

ದಸರಾ ಸಮಿತಿ ಅಧ್ಯಕ್ಷ ವಿನಯ್ ಕರ್ಕೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ದಸರಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂದರ್, ಮಲ್ಪೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸಭೆಯಲ್ಲಿ ನಾಡೋಜ ಡಾ. ಜಿ. ಶಂಕರ್, ಆನಂದ್ ಸಿ. ಕುಂದರ್, ಜಯ ಸಿ. ಕೋಟ್ಯಾನ್, ಯಶ್ ಪಾಲ್ ಎ. ಸುವರ್ಣ, ಮೋಹನ್ ಬೆಂಗ್ರೆ, ಶರಣ್ ಕುಮಾರ್ ಮಟ್ಟು, ವಿನಯ್ ಕರ್ಕೇರ, ರಾಘವೇಂದ್ರ ಉಪಾಧ್ಯಾಯ, ಗಿರಿಧರ್ ಸುವರ್ಣ ಮೂಳೂರು, ಹರಿಯಪ್ಪ ಆರ್. ಕೋಟ್ಯಾನ್, ಯುವರಾಜ್ ಸಾಲಿಯಾನ್ ಮಸ್ಕತ್, ಸತೀಶ್ ಅಮೀನ್ ಬಾರ್ಕೂರು, ಉದಯ್ ಕುಮಾರ್ ಹಟ್ಟಿಯಂಗಡಿ, ರತ್ನಾಕರ್ ಸಾಲ್ಯಾನ್ ಮಲ್ಪೆ, ನಾಗರಾಜ್ ಸುವರ್ಣ ಮಲ್ಪೆ, ಶ್ರೀಪತಿ ಭಟ್ ಉಚ್ಚಿಲ, ಕವಿತಾ ಕಾಂಚನ್, ಸುಗುಣ ಕರ್ಕೇರ, ಸುಧೀರ್ ಉಳ್ಳಾಲ, ಮನೋಜ್ ಕಾಂಚನ್ ಎರ್ಮಾಳ್, ಮನೋಜ್ ಉಳ್ಳಾಲ, ರಾಜೇಶ್ ಪುತ್ರನ್ ಉಳ್ಳಾಲ, ಸತೀಶ್ ಕುಂದರ್ ಮಲ್ಪೆ, ರವೀಶ್ ಎಸ್. ಕೊರವಡಿ, ಗೌತಮ್ ಕೋಡಿಕಲ್, ಗುಂಡು ಬಿ. ಅಮೀನ್ ಕಿದಿಯೂರ್, ವಾಸುದೇವ ಸಾಲ್ಯಾನ್ ಕಟಪಾಡಿ, ಸುಧಾಕರ್ ಕುಂದರ್ ಮಲ್ಪೆ, ದಿನೇಶ್ ಎರ್ಮಾಳ್, ಚೇತನ್ ಬೆಂಗ್ರೆ, ಶಿವರಾಮ್ ಕೋಟ ಹಾಗೂ ಕಿರಣ್ ಕುಮಾರ್ ಪಿತ್ರೋಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments