ಪಡುಬಿದ್ರಿ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಆಗಸ್ಟ್ 15ರಂದು ಬೆಳಿಗ್ಗೆ 9.30ಕ್ಕೆ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಕಚೇರಿ ಎದುರು, ಸಪ್ಪಾ ಮಾರ್ಕೆಟ್ ಬಳಿ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಗೌರವ ಸಲ್ಲಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪಕ್ಷದ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಬೂತ್ ಅಧ್ಯಕ್ಷರು, BLA-2 ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.
“ದೇಶದ ಸ್ವಾತಂತ್ರ್ಯ – ನಮ್ಮ ಹೆಮ್ಮೆ, ದೇಶದ ಏಕತೆ – ನಮ್ಮ ಶಕ್ತಿ” ಎಂಬ ಸಂದೇಶದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಒಗ್ಗಟ್ಟಿನಿಂದ ಆಚರಿಸಲು ಕರೆ ನೀಡಲಾಗಿದೆ.
ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೀಜ್ ಹುಸೆನ್ ಹಾಗೂ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಡುಬಿದ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


