HomeFresh Newsಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆ

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆ

ಪಡುಬಿದ್ರಿ, ಆ.15: ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಉಪಸ್ಥಿತಿಯಲ್ಲಿ ಪೇಟೆ ಭಾಗದ ಧ್ವಜಸ್ತಂಭದ ಬಳಿ ಸಂಭ್ರಮ ಆಚರಿಸಲಾಯಿತು.

ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, “ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಅನೇಕ ಭಾಷೆ, ಸಂಸ್ಕೃತಿ ಹಾಗೂ ಧರ್ಮಗಳ ಸುಂದರ ಸಂಗಮವಾಗಿದೆ. ಭಾರತ ಜಾತ್ಯತೀತ ರಾಷ್ಟ್ರವಾಗಿದ್ದು, ಪ್ರತಿಯೊಬ್ಬರೂ ಪರಸ್ಪರ ಗೌರವದಿಂದ ಬದುಕುವುದು ನಮ್ಮ ದೇಶದ ಶಕ್ತಿ. ದೇಶವನ್ನು ಗೌರವಿಸಿ, ಸಂವಿಧಾನದ ಆದರ್ಶಗಳನ್ನು ಎತ್ತಿಹಿಡಿಯುವ ಪ್ರತಿಯೊಬ್ಬರೂ ನಿಜವಾದ ಭಾರತೀಯರು” ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಸೇನಾಧಿಕಾರಿ ಪಿ.ಕೆ. ಮುಯ್ಯಿದ್ದೀನ್ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಾರ್ವಜನಿಕ ನಿಯಮಗಳನ್ನು ಗೌರವಿಸಿ, ಜವಾಬ್ದಾರಿಯುತ ನಾಗರಿಕರಾಗಿ ನಡೆದುಕೊಂಡು ದೇಶದ ಪ್ರಗತಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವೈ. ಸುಕುಮಾರ್ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ. ಯುವಜನತೆ ದೇಶದ ಭವಿಷ್ಯವಾಗಿದ್ದು, ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶಾಂತಲತಾ ಶೆಟ್ಟಿ, ನವೀನ್ ಎನ್ ಶೆಟ್ಟಿ. ಗಣೇಶ್ ಕೋಟ್ಯಾನ್. ಮಹಮ್ಮದ್ ನಿಯಾಜ್, ಅಶೋಕ್ ಸಾಲ್ಯಾನ್, ಕರುಣಾಕರ್ ಪೂಜಾರಿ, ಅಶ್ವಿನ್ ಕೋಟ್ಯಾನ್, ಕೀರ್ತಿ ಕುಮಾರ್,ಎಮ್ ಎಸ್ .ಶಾಫಿ ಸುನಂದ ದೇವಾಡಿಗ, ಜ್ಯೋತಿ ಮೆನನ್, ಸುಚರಿತಾ ಅಮೀನ್, ಮುಬೀನಾ ಬೇಗಮ್, ತಸ್ನೀನ್ ಆರಾ, ನ್ಯಮಾ. ಉಷಾ .ರಾಜೇಶ್ ಶೇರಿಗಾರ್,ಲಿಯಾಖತ್ ಮುನ್ನ ಅಬ್ದುಲ್ ರಜಾಕ್. ರಿಫಾನ್ .ಸದಾಶಿವ ಪೂಜಾರಿ, ಶಬಾನ್, ವಾಮನ್ ಪೂಜಾರಿ .ಅಬ್ದುಲ್ ಖಾದರ್ .ಸುಬ್ಬಯ್ಯ ಮೂಲ್ಯ .ಅರ್ಫಾಜ್ .ಹಾಗೂ ನಾರಾಯಣ್ ಕಲ್ಲಟೆ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೀಜ್ ಹುಸೇನ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸಂತೋಷ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments