HomeFresh Newsಕೋಟ್ಯಂತರ ರೂ. ಮೌಲ್ಯದ ಮಾದಕವಸ್ತು ಸಾಗಣೆ; ಓರ್ವನ ಸೆರೆ

ಕೋಟ್ಯಂತರ ರೂ. ಮೌಲ್ಯದ ಮಾದಕವಸ್ತು ಸಾಗಣೆ; ಓರ್ವನ ಸೆರೆ

ಬಂಟ್ವಾಳ: ಕೋಟ್ಯಂತರ ರೂ. ಮೌಲ್ಯದ ಮಾದಕವಸ್ತುಗಳನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಜಾಲವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಓರ್ವನನ್ನು ಕಡೇಶಿವಾಲಯ ಗ್ರಾಮದ ಅಮೈ ಎಂಬಲ್ಲಿ ಬಂಧಿಸಿದ್ದಾರೆ.

ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ (35) ಬಂಧಿತ ಆರೋಪಿ. ಕಾರಿನಲ್ಲಿದ್ದ ಒಟ್ಟು 538.63 ಗ್ರಾಂ ಎಂಡಿಎಂಎ ಮತ್ತು 99.12 ಗ್ರಾಂ ಕೊಕೈನ್ ಹಾಗೂ ಖಾಲಿ ಪ್ಲಾಸ್ಟಿಕ್ ಡಬ್ಬಿಗಳು, ಡಿಜಿಟಲ್ ತೂಕದ ಯಂತ್ರ ಸೇರಿದಂತೆ ಇತರೆ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾದಕ ವಸ್ತುಗಳ ಅಂದಾಜು ಮೌಲ್ಯವು ಎಂಡಿಎಂಎ 53,86,300 ರೂ. ಹಾಗೂ ಕೊಕೈನ್ 49,56,000 ರೂ. ಆಗಿದ್ದು, ಇತರ ವಶಪಡಿಸಿಕೊಂಡ ಸ್ವತ್ತುಗಳ ಮೌಲ್ಯ ಸೇರಿದಂತೆ ಒಟ್ಟು ಮೌಲ್ಯ 1,05,59,450 ರೂ. ಎಂದು ಅಂದಾಜಿಸಲಾಗಿದೆ.

ಆ. 15ರಂದು ಮಧ್ಯರಾತ್ರಿ 1.45 ರ ಸುಮಾರಿಗೆ ಹಾಸನ ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕ ವಸ್ತುಗಳ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಬಂಟ್ವಾಳ ಗ್ರಾಮಾಂತರ ಎಸ್‌ಐ ಮಂಜುನಾಥ್ ಅವರಿಗೆ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಬಂಟ್ವಾಳ ಗ್ರಾಮಾಂತರ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಕಾರೊಂದನ್ನು ತಡೆದು ಪರಿಶೀಲಿಸಿದ್ದಾರೆ.

ಕಾರಿನ ಚಾಲಕನನ್ನು ವಿಚಾರಿಸಿದಾಗ ಆತ ಬೆಂಗಳೂರು ಮೂಲದ ಮಹಮ್ಮದ್ ಅಮೀರ್ ಜರ್ತಾಬ್ ಎಂದು ತಿಳಿದುಬಂದಿದೆ. ಆತನನ್ನು ಪೊಲೀಸರು ವಿಚಾರಿಸಿದಾಗ ಕಾರಿನಲ್ಲಿ ಆತ ಮಾದಕವಸ್ತು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಬಂಟ್ವಾಳ ಉಪವಿಭಾಗದ ಎಎಸ್‌ಪಿ ಯಶ್ ಕುಮಾರ್ ಶರ್ಮ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಪೊಲೀಸ್ ಇನ್ಸ್‌ಪೆಕ್ಟರ್ ಅನಂತಪದ್ಮನಾಭ ಅವರ ನೇತೃತ್ವದಲ್ಲಿ ಗ್ರಾಮಾಂತರ ಠಾಣೆಯ ಎಸ್‌ಐ ಮಂಜುನಾಥ್ ಟಿ, ಸಿಬ್ಬಂದಿ ಅಶೋಕ್, ರಾಘವೇಂದ್ರ, ಪ್ರಶಾಂತ್, ಬಸವರಾಜ್, ನಜೀರ್, ಶ್ರೀಧರ್, ಮಾರುತಿ, ಕುಮಾರ್ ಹಾಗೂ ವಿವೇಕ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments