ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಮುನ್ನೂರು ಒಕ್ಕೂಟದ ಕುತ್ತಾರ್ ಸುಭಾಷ್ ನಗರದಲ್ಲಿ ತುಳುನಾಡಿನ ಸಾಂಸ್ಕೃತಿಕ ಆಚರಣೆಯಾದ ’ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಯಿತು.

ಈ ವಿಶೇಷ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊರಗ ತನಿಯ ಸೇವಾ ಸಮಿತಿಯ ಅಧ್ಯಕ್ಷರಾದ ಗೋಪಾಲ್ ದಾಸ್ ವಹಿಸಿಕೊಂಡು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸೇವಾ ನಿರಂತರ ಪ್ರತಿನಿಧಿ,ಶಾಂತಿ ಕ್ರಿಸ್ಟೆಲ್ಲಾ, ಸಮಾಜ ಸೇವಕಿ ಹಾಗೂ ಸದಸ್ಯರು ಧನಲಕ್ಷ್ಮಿ ಗಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಮುನ್ನೂರು ಒಕ್ಕೂಟದ ಅಧ್ಯಕ್ಷರಾದ ಸುನೀತಾ, ಮೇಲ್ವಿಚಾರಕರು ಅಶೋಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಕೆ.ಎಲ್.ಎ ಕುಮಾರಿ ಯೋಗೇಶ್ವರಿ ಅವರು ಭಾಗವಹಿಸಿ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿದರು. ತುಳುನಾಡಿನ ಆಟಿ ತಿಂಗಳ ಆಚರಣೆ, ಸಂಪ್ರದಾಯ ಹಾಗೂ ಅದರ ಮಹತ್ವದ ಕುರಿತು ಕಾರ್ಯಕ್ರಮದಲ್ಲಿ ಬೆಳಕು ಚೆಲ್ಲಲಾಯಿತು.
ಸಭೆಯಲ್ಲಿದ್ದ ಎಲ್ಲರ ಗಮನ ಸೆಳೆದ ಈ ಕಾರ್ಯಕ್ರಮವನ್ನು ಪುಷ್ಪಲತಾ ಅವರು ತಮ್ಮ ನಿರೂಪಣೆಯ ಮೂಲಕ ಯಶಸ್ವಿಯಾಗಿ ಮುನ್ನಡೆಸಿದರು.

