HomeFresh Newsಮಾಜಿ ಸಚಿವ ಬಿ.ಸಿ. ನಾಗೇಶ್ ವಿಧಿವಶ

ಮಾಜಿ ಸಚಿವ ಬಿ.ಸಿ. ನಾಗೇಶ್ ವಿಧಿವಶ

ತಿಪಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದ ಬಿ.ಸಿ. ನಾಗೇಶ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಬಿ.ಸಿ. ನಾಗೇಶ್ ಅವರು ತಿಪಟೂರು ವಿಧಾನಸಭಾ ಕ್ಷೇತ್ರದ ಪ್ರಮುಖ ಬಿಜೆಪಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಸಂಘಟನಾ ಹಿನ್ನೆಲೆಯಿಂದ ರಾಜಕೀಯ ಪ್ರವೇಶಿಸಿದ ಅವರು, ತಿಪಟೂರು ಕ್ಷೇತ್ರದಲ್ಲಿ ಬಿಜೆಪಿಯ ಸಂಘಟನೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

೨೦೦೮ರಲ್ಲಿ ಮೊದಲ ಬಾರಿಗೆ ತಿಪಟೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಅವರು, 2013ರ ಚುನಾವಣೆಯಲ್ಲಿ ಸೋಲು ಅನುಭವಿಸಿದರು. ನಂತರ ರಾಜಕೀಯವಾಗಿ ಮತ್ತೆ ಸಂಘಟಿಸಿಕೊಂಡು 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ತಿಪಟೂರು ಕ್ಷೇತ್ರದಿಂದ ಪುನರಾಯ್ಕೆಯಾದರು.

೨೦೧೮ರಲ್ಲಿ ಶಾಸಕರಾಗಿ ಆಯ್ಕೆಯಾದ ಬಳಿಕ ಬಿ.ಸಿ. ನಾಗೇಶ್ ಅವರಿಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಮಹತ್ವದ ಜವಾಬ್ದಾರಿ ದೊರೆಯಿತು. ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments