HomeFresh Newsಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ

ಉಚ್ಚಿಲ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಗಸ್ಟ್ 21, 2026ರ ಶುಕ್ರವಾರ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ ಭಕ್ತಿಭಾವದಿಂದ ನಡೆಯಲಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ಕಲಶ ಪ್ರತಿಷ್ಠೆ ನೆರವೇರಲಿದ್ದು, ಬಳಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನೆರವೇರಿದ ನಂತರ ಭಕ್ತರಿಗೆ ಮಹಾ ಅನ್ನಸಂತರ್ಪಣೆ ಆಯೋಜಿಸಲಾಗಿದೆ.
ಈ ಪವಿತ್ರ ಪೂಜಾ ಕಾರ್ಯಕ್ರಮದಲ್ಲಿ ಮಹಿಳೆಯರು ಸೇರಿದಂತೆ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಮಹಾಲಕ್ಷ್ಮೀ ಅಮ್ಮನವರ ದಿವ್ಯ ಕೃಪೆಗೆ ಪಾತ್ರರಾಗುವಂತೆ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments