ಬೆಳಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.), ಕಾಪು ತಾಲೂಕು ಉಚ್ಚಿಲ ವಲಯದ ವತಿಯಿಂದ ಬೆಳಪು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಪತ್ರಕರ್ತ ರಾಕೇಶ್ ಕುಂಜೂರು ಅವರು ಉದ್ಘಾಟಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಅವುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತರಾಗಬೇಕು ಎಂದು ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಕಾಪು ತಾಲೂಕು ಯೋಜನಾಧಿಕಾರಿಗಳು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ, ಉತ್ತಮ ಶಿಕ್ಷಣದೊಂದಿಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಶುಭ ಹಾರೈಸಿದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಅವರು ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದರು. ವಲಯ ಮೇಲ್ವಿಚಾರಕಿ ವಿನುತಾ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಸವಿತಾ ಶೆಟ್ಟಿ, ಶಾಲೆಯ ಶಿಕ್ಷಕ ವೃಂದ ಹಾಗೂ 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಪು ಸರ್ಕಾರಿ ಪ್ರೌಢಶಾಲೆಯಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ
RELATED ARTICLES

