ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಭವನದಲ್ಲಿ ಶುಕ್ರವಾರ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಹಾಗೂ ಪೂಜಾ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ಸಾವಿರಾರು ಮಹಿಳೆಯರು ಪೂಜೆಯಲ್ಲಿ ಭಾಗವಹಿಸಿ ಶ್ರೀ ಮಹಾಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾದರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಬೆಳಿಗ್ಗೆ ಕಲಶ ಪ್ರತಿಷ್ಠೆ ನೆರವೇರಿದ ಬಳಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಮಧ್ಯಾಹ್ನ ಶ್ರೀ ಕ್ಷೇತ್ರದಲ್ಲಿ ಶ್ರೀ ಮಹಾಗಣಪತಿ, ಶ್ರೀ ಮಹಾಲಕ್ಷ್ಮೀ ಅಮ್ಮ ಹಾಗೂ ಶ್ರೀ ಭದ್ರಕಾಳಿ ಅಮ್ಮನವರ ಮಹಾಪೂಜೆ ನೆರವೇರಿತು. ಇದೇ ಸಂದರ್ಭದಲ್ಲಿ ಭದ್ರಕಾಳಿ ಅಮ್ಮನವರ ದರ್ಶನ ಸೇವೆಯೂ ನಡೆಯಿತು.

ಮಹಾಪೂಜೆಯ ಬಳಿಕ ಭಕ್ತರಿಗೆ ಮಹಾ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ.ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ರತ್ನಾಕರ ಸಾಲ್ಯಾನ್ ಮಲ್ಪೆ, ಸುಜಿತ್ ಸಾಲ್ಯಾನ್ ಮೂಲ್ಕಿ, ಗುಂಡು ಬಿ. ಅಮೀನ್ ಕಿದಿಯೂರು, ವಿನಯ್ ಕರ್ಕೇರ ಮಲ್ಪೆ, ವಾಸುದೇವ ಸಾಲ್ಯಾನ್ ಕಟಪಾಡಿ, ಸುಧಾಕರ್ ಕುಂದರ್ ಬಂಕೇರ್ ಕಟ್ಟ, ಜಯಾ ಶೆಟ್ಟಿ ಕಟಪಾಡಿ, ದಿನೇಶ್ ಎರ್ಮಾಳ್, ಅನಿಲ್ ಕುಮಾರ್ ಬೊಕ್ಕಪಟ್ಟಣ, ಸತೀಶ್ ಸಾಲ್ಯಾನ್ ಎರ್ಮಾಳ್, ಮನೋಜ್ ಕಾಂಚನ್ ಎರ್ಮಾಳ್, ಶಿವರಾಮ್ ಕೋಟ, ಸುಧಾಕರ್ ಸುವರ್ಣ ಎರ್ಮಾಳು, ಮೋಹನ್ ಬಂಗೇರ ಕಾಪು, ಸರ್ವೋತ್ತಮ ಕುಂದರ್, ಶಿವಪ್ಪ ಕಾಂಚನ್ ಮಲ್ಪೆ, ಸತೀಶ್ ಕುಂದರ್ ಮಲ್ಪೆ, ನಾರಾಯಣ ಸಿ. ಕರ್ಕೇರ, ಸುಗುಣ ಎಸ್. ಕರ್ಕೇರ, ಕವಿತಾ ಕಾಂಚನ್, ಪೂರ್ಣಿಮಾ ಚಂದ್ರಶೇಖರ ಸೇರಿದಂತೆ ಕ್ಷೇತ್ರದ ಆಡಳಿತ ಮಂಡಳಿ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.
ಶ್ರೀ ಮಹಾಲಕ್ಷ್ಮೀ ದೇವಳದ ಪ್ರಬಂಧಕ ಸತೀಶ್ ಅಮೀನ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

