HomeFresh Newsಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಕಾಪು: ಉಡುಪಿ ಜಿಲ್ಲೆಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅರ್ಚಕತ್ವದಲ್ಲಿ
ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ ಭಕ್ತಿಭಾವದಿಂದ ನೆರವೇರಿತು.

ವರ ಮಹಾಲಕ್ಷೀ ಪೂಜಾ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಹಿಳೆಯರಿಗೆ ಅರಿಶಿನ–ಕುಂಕುಮದ ಜೊತೆಗೆ ವರಮಹಾಲಕ್ಷ್ಮೀ ಹಬ್ಬದ ಪ್ರಸಾದವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಸದಸ್ಯರಾದ ಮಾಧವ ಆರ್. ಪಾಲನ್, ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಜಯಲಕ್ಷ್ಮಿ ಎಸ್. ಶೆಟ್ಟಿ, ಚರಿತ ದೇವಾಡಿಗ, ಪ್ರಬಂಧಕ ಗೋವರ್ಧನ್ ಶೇರಿಗಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Sudha Interior new 1
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments