HomeFresh Newsಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಪ್ರಥಮ ಆರೋಪಿ ಕೃಷ್ಣನಗರದ ಚೇತನ್‌ಗೆ ಜಾಮೀನು ಮಂಜೂರು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಪ್ರಥಮ ಆರೋಪಿ ಕೃಷ್ಣನಗರದ ಚೇತನ್‌ಗೆ ಜಾಮೀನು ಮಂಜೂರು

ಪುತ್ತೂರು:ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥರಾಗಿದ್ದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಪ್ರಥಮ ಆರೋಪಿ ಕೃಷ್ಣನಗರದ ಚೇತನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

2023 ನ.6ರಂದು ನೆಹರುನಗರದಲ್ಲಿ ರಾತ್ರಿ ವೇಳೆ ಅಕ್ಷಯ್ ಕಲ್ಲೇಗ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಕೃಷ್ಣನಗರದ ಚೇತನ್ ಪಡೀಲು ನಿವಾಸಿ ಮನೀಷ್, ಬನ್ನೂರಿನ ಮಂಜುನಾಥ್ ಯಾನೆ ಹರಿ ಹಾಗೂ ಕೇಶವ ಪಡೀಲ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವಜಾಗೊಳಿಸಿತ್ತು.

ಬಳಿಕದ ಬೆಳವಣಿಗೆಯಲ್ಲಿ ಹೈ ಕೋರ್ಟ್ ಕೂಡಾ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಪ್ರಕರಣದ 3ನೇ ಆರೋಪಿ ಮಂಜುನಾಥ್ ಶೆಣೈ ಮತ್ತು 4ನೇ ಆರೋಪಿ ಕೇಶವ ಅವರಿಗೆ ಕೆಲ ಸಮಯದ ಹಿಂದೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.ಆ ಬಳಿಕದ ಬೆಳವಣಿಗೆಯಲ್ಲಿ, ಪ್ರಕರಣದ 1ನೇ ಆರೋಪಿ ಚೇತನ್ ಮತ್ತು 2ನೇ ಆರೋಪಿ ಮನೀಶ್ ಜಾಮೀನು ಕೋರಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿಯನ್ನು ನ್ಯಾಯಾಲಯ ತಿರಸ್ಕೃತಗೊಳಿಸಿತ್ತು. ಇದೀಗ ಆರೋಪಿ ಚೇತನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಪಿ ಮನೀಷ್ಠೆ ಕೆಲ ದಿನಗಳ ಹಿಂದೆಯಷ್ಟೆ ಹೈಕೋರ್ಟ್ನಲ್ಲಿ ಜಾಮೀನು ಮಂಜೂರಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments