HomeFresh Newsವಿದ್ಯಾರ್ಥಿಗಳು ಸಮಾಜಕ್ಕೆ ಅಮೃತ ಸದೃಶರಾಗಬೇಕು: ಜಗದ್ಗುರು

ವಿದ್ಯಾರ್ಥಿಗಳು ಸಮಾಜಕ್ಕೆ ಅಮೃತ ಸದೃಶರಾಗಬೇಕು: ಜಗದ್ಗುರು

ಕಟಪಾಡಿ/ಪಡುಕುತ್ಯಾರು: ಕಲಿತ ವಿದ್ಯೆ ಸಮಾಜಕ್ಕೆ ಪೂರಕವಾಗಬೇಕು. ವಿದ್ಯಾರ್ಥಿಗಳು ಸದ್ವಿದ್ಯೆ, ಸತ್ಸಂಪತ್ತು, ಸತ್ಬಲ, ಸತ್ಕೀರ್ತಿ ಹಾಗೂ ಪುಣ್ಯ ಸಂಪಾದನೆಗೆ ಆದ್ಯತೆ ನೀಡಿ ಸಮಾಜಕ್ಕೆ ಅಮೃತ ಸದೃಶರಾಗಬೇಕು ಎಂದು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಕಟಪಾಡಿ–ಪಡುಕುತ್ಯಾರು ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು.
ಶ್ರೀಮಠದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯ ವ್ರತ ಆಚರಣೆ ಹಾಗೂ ಸ್ವರ್ಣ ಜನ್ಮವರ್ಧಂತಿ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ವಿದ್ಯಾರ್ಥಿ ಅಭಿನಂದನಾ ಸಮಾರಂಭದಲ್ಲಿ ಅವರು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಆಶೀರ್ವಚನ ನೀಡಿದರು.
ವಿವಿಧ ಕ್ಷೇತ್ರಗಳಲ್ಲಿ ಡಾಕ್ಟರೇಟ್, ಸಿಎ, ವೈದ್ಯಕೀಯ ಸೇರಿದಂತೆ ಉನ್ನತ ಪದವಿ ಗಳಿಸಿದ ಸಾಧಕರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ–ಸ್ನಾತಕೋತ್ತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೂ ಸನ್ಮಾನ ನಡೆಯಿತು.
ಗ್ರಾಮ ಪ್ರತಿಭಾ ಪುರಸ್ಕಾರ ವಿಜೇತ ಮೌನೇಶ್ ವಿಶ್ವಕರ್ಮ ಮಂಗಳೂರು, ಶಾಸ್ತ್ರೀಯ ಸಂಗೀತ ಕ್ಷೇತ್ರದ ಸಾಧಕ ಪ್ರಭಾಕರ ಸುಜಾತ ಪ್ರಭಾಕರಾಚಾರ್ಯ ಹಾಗೂ ಅಥ್ಲೆಟಿಕ್ಸ್‌ನಲ್ಲಿ ಸಾಧನೆ ಮಾಡಿದ ಮಿಥುಲ್ ಗಣೇಶ್ ಆಚಾರ್ಯ ಬೆಂಗಳೂರು ಅವರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಪದವೀಧರರು, ವಿದ್ಯಾರ್ಥಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ. ಆಚಾರ್ಯ ಸ್ವಾಗತಿಸಿದರು. ಅರವಿಂದ ವೈ. ಆಚಾರ್ಯ ವಂದಿಸಿದರು. ಕೆ.ಎಂ. ಗಂಗಾಧರ ಆಚಾರ್ಯ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಮುನಿಯಾಲು ಆಯುರ್ವೇದಿಕ್ ಕಾಲೇಜು ಆಸ್ಪತ್ರೆಯ ವತಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು. ಶ್ರೀನಿವಾಸ್ ಆಚಾರ್ಯ ಆದಿ ಉಡುಪಿ ನೇತೃತ್ವ ವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments