HomeFresh Newsಪೆರಂಪಳ್ಳಿಯಲ್ಲಿ ಎಲೆಕ್ಟ್ರಿಕ್ ರಿಕ್ಷಾಗೆ ಬೆಂಕಿ: ಇಬ್ಬರು ಯುವಕರ ಸಾಹಸದಿಂದ ತಪ್ಪಿದ ಅನಾಹುತ

ಪೆರಂಪಳ್ಳಿಯಲ್ಲಿ ಎಲೆಕ್ಟ್ರಿಕ್ ರಿಕ್ಷಾಗೆ ಬೆಂಕಿ: ಇಬ್ಬರು ಯುವಕರ ಸಾಹಸದಿಂದ ತಪ್ಪಿದ ಅನಾಹುತ

ಉಡುಪಿ: ಪೆರಂಪಳ್ಳಿ ಸಮೀಪ ಮನೆಯ ಶೆಡ್‌ನಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ರಿಕ್ಷಾ ಏಕಾಏಕಿ ಹೊತ್ತಿ ಉರಿದು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್‌ಗೂ ಬೆಂಕಿ ವ್ಯಾಪಿಸಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಬೆಂಕಿ ಕಾಣಿಸಿಕೊಂಡ ವೇಳೆ ಮನೆಯವರು ಆತಂಕಗೊಂಡಿದ್ದು, ಸ್ಥಳಕ್ಕೆ ಧಾವಿಸಿದ ಇಂಜಿನಿಯರ್ ಮನೋಜ್ ಹಾಗೂ ಯುವ ಉದ್ಯಮಿ ಶರತ್ ತಮ್ಮ ಜೀವದ ಹಂಗು ತೊರೆದು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಮೊದಲು ಬೆಂಕಿ ತಗುಲಿದ್ದ ಕಾರನ್ನು ಸುರಕ್ಷಿತವಾಗಿ ಹೊರತೆಗೆದು, ನೀರು ಹಾಗೂ ಮಣ್ಣಿನ ಸಹಾಯದಿಂದ ಬೆಂಕಿ ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದೆ.

ಇಬ್ಬರು ಯುವಕರ ಸಮಯಪ್ರಜ್ಞೆ ಹಾಗೂ ಧೈರ್ಯದಿಂದಾಗಿ ಬೆಂಕಿ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ವ್ಯಾಪಿಸಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments