ಉಡುಪಿ: ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ಕಲ್ಪಿಸುವ ಉದ್ದೇಶದಿಂದ 5ನೇ ಮೆಗಾ ಜಾಬ್ ಫೇರ್ & ಸ್ಟಡಿ ಅಬ್ರಾಡ್ ಎಕ್ಸ್ಪೋ–2026 ಅ.9ರಂದು ಉಡುಪಿಯಲ್ಲಿ ನಡೆಯಲಿದೆ.
‘Bridging Talent… Building Futures!’ ಎಂಬ ಆಶಯದೊಂದಿಗೆ ಆಯೋಜಿಸಲಾಗಿರುವ ಈ ಉದ್ಯೋಗ ಮೇಳದಲ್ಲಿ 50ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, 2,500ಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿರಲಿವೆ. ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇರ ಸಂದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಅಕ್ಟೋಬರ್ 9 ರಂದು ಬೆಳಗ್ಗೆ 9.30ರಿಂದ ಕುಂತಲ್ ನಗರದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್, ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಹಾಲ್ ನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಇಂಜಿನಿಯರಿಂಗ್ ಹಾಗೂ ಇತರ ಪದವಿ, MBA, ಡಿಪ್ಲೊಮಾ, ITI ಮತ್ತು PUC ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಉದ್ಯೋಗಾವಕಾಶಗಳ ಜೊತೆಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವ ಕುರಿತು ಮಾಹಿತಿ, ವಿವಿಧ ಕಂಪನಿಗಳೊಂದಿಗೆ ನೇರ ಸಂವಾದ ಹಾಗೂ ವೃತ್ತಿ ಭವಿಷ್ಯಕ್ಕೆ ಸಂಬಂಧಿಸಿದ ಅವಕಾಶಗಳನ್ನು ಒಂದೇ ವೇದಿಕೆಯಲ್ಲಿ ಪಡೆಯಬಹುದಾಗಿದೆ.
ಅಭ್ಯರ್ಥಿಗಳು ಪೋಸ್ಟರ್ನಲ್ಲಿರುವ QR ಕೋಡ್ ಸ್ಕ್ಯಾನ್ ಮಾಡುವ ಮೂಲಕ ನೋಂದಾಯಿಸಿಕೊಳ್ಳಬಹುದು ಅಥವಾ ಆನ್ಲೈನ್ ನೋಂದಣಿ ಫಾರ್ಮ್ ಮೂಲಕ ನೋಂದಣಿ ಮಾಡಿಕೊಳ್ಳ ಬಹುದಾಗಿದೆ. ಉದ್ಯೋಗ ಹುಡುಕುತ್ತಿರುವ ಯುವಜನರು, ವಿದ್ಯಾರ್ಥಿಗಳು ಹಾಗೂ ವೃತ್ತಿ ಬದಲಾವಣೆಯನ್ನು ಬಯಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಮೊಬೈಲ್ ಸಂಖ್ಯೆಗೆ ಸಂಪರ್ಕಿಸ ಬೇಕೆಂದು ಆಯೋಜಕರು ತಿಳಿಸಿದ್ದಾರೆ.
ಮೊಬೈಲ್ ಸಂಖ್ಯೆ: 81470 01240

