HomeFresh Newsಆ.31ರಂದು ಪುತ್ತೂರು ಚಲೋಗೆ ಬಿಜೆಪಿ ಭರ್ಜರಿ ಸಿದ್ಧತೆ

ಆ.31ರಂದು ಪುತ್ತೂರು ಚಲೋಗೆ ಬಿಜೆಪಿ ಭರ್ಜರಿ ಸಿದ್ಧತೆ

ಪುತ್ತೂರು: ಪುತ್ತೂರಿನಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ‘ಪುತ್ತೂರು ಚಲೋ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬಿಜೆಪಿ ಸಜ್ಜಾಗಿದೆ. ಕಾರ್ಯಕ್ರಮದ ಪೂರ್ವಭಾವಿ ಸಭೆ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ನಡೆಯಿತು.

ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎರಡು ಮಂಡಲಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲೆಯ ಪ್ರಮುಖರು, ಮಂಡಲದ ಪ್ರಮುಖರು ಹಾಗೂ ಪುತ್ತೂರು ಬಿಜೆಪಿಯ ವಿವಿಧ ಹಂತದ ಪದಾಧಿಕಾರಿಗಳು ಭಾಗವಹಿಸಿ ‘ಪುತ್ತೂರು ಚಲೋ’ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಿದರು.

ಪುತ್ತೂರಿನಲ್ಲಿ ಅನ್ಯಾಯ, ಅಕ್ರಮ, ದೌರ್ಜನ್ಯ ಹಾಗೂ ಅಧಿಕಾರದ ದುರುಪಯೋಗ ನಡೆಯುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಇದರ ವಿರುದ್ಧ ಜನರ ಧ್ವನಿಯಾಗಿ ಹೋರಾಟ ನಡೆಸುವುದಾಗಿ ತಿಳಿಸಿದೆ. ಜನರ ಹಕ್ಕು, ಶಾಂತಿ ಮತ್ತು ನ್ಯಾಯಕ್ಕಾಗಿ ಯಾವುದೇ ಒತ್ತಡಕ್ಕೂ ಮಣಿಯದೆ ಹೋರಾಟ ಮುಂದುವರಿಸುವ ಸಂಕಲ್ಪವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು.

ಆಗಸ್ಟ್ 31ರಂದು ಬೆಳಿಗ್ಗೆ 10.30ಕ್ಕೆ ದರ್ಬೆ ವೃತ್ತದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ‘ಪುತ್ತೂರು ಚಲೋ’ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.

ನ್ಯಾಯಕ್ಕಾಗಿ, ಪುತ್ತೂರಿನ ಹಿತಕ್ಕಾಗಿ ಹಾಗೂ ಅನ್ಯಾಯದ ವಿರುದ್ಧ ಒಂದಾಗಿ ನಿಲ್ಲುವಂತೆ ಕರೆ ನೀಡಿರುವ ಬಿಜೆಪಿ, ಪುತ್ತೂರಿನ ಸಮಸ್ತ ನಾಗರಿಕರು ಹಾಗೂ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ‘ಪುತ್ತೂರು ಚಲೋ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದೆ.

Sudha Interior new 1
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments