ಹೆಜಮಾಡಿ: ಹೆಜಮಾಡಿ ಕೋಡಿಕರೆ ಅಡ್ಕ ನಿವಾಸಿ ಚಂದ್ರಶೇಖರ್ ಸುವರ್ಣ (52) ಅವರು ಇಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿಯನ್ನು ಅಗಲಿದ್ದಾರೆ.
ಮೇಸ್ತ್ರಿ ವೃತ್ತಿಯನ್ನು ನಿರ್ವಹಿಸುತ್ತಿದ್ದ ಚಂದ್ರಶೇಖರ್ ಸುವರ್ಣ ಅವರು ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿದ್ದರು. ಅಡ್ಕ ಶ್ರೀ ಸತ್ಯನಾರಾಯಣ ದೇವಸ್ಥಾನದ ಉಪಾಧ್ಯಕ್ಷರಾಗಿ ಹಾಗೂ ಅಡ್ಕ ಮೂಲಮನೆಯ ದೈವದ ನಿತ್ಯ ಪೂಜಾರಿಯಾಗಿ ಭಕ್ತಿಯಿಂದ ಸೇವೆ ಸಲ್ಲಿಸಿದ್ದರು.
ಅಲ್ಲದೆ, ಅಡ್ಕ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾಗಿ ಯುವಕರನ್ನು ಒಗ್ಗೂಡಿಸಿ ವಿವಿಧ ಸಮಾಜಮುಖಿ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದರು.
ಅವರ ಸರಳತೆ, ಸ್ನೇಹಪರತೆ ಹಾಗೂ ಸೇವಾ ಮನೋಭಾವದಿಂದ ಎಲ್ಲರ ಪ್ರೀತಿ ಮತ್ತು ವಿಶ್ವಾಸವನ್ನು ಗಳಿಸಿದ್ದ ಚಂದ್ರಶೇಖರ್ ಸುವರ್ಣ ಅವರು ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು.
ಅವರ ನಿಧನಕ್ಕೆ ಕುಟುಂಬಸ್ಥರು, ಬಂಧು-ಮಿತ್ರರು, ಊರಿನ ಗಣ್ಯರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

