ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾಗಿದ್ದ, ನಿವೃತ್ತ ತಹಶೀಲ್ದಾರ್, ಶತಾಯುಷಿ ಬಿ.ಎಸ್. ಕುಲಾಲ್ ಅವರು ಆ.30ರಂದು ನಿಧನರಾದರು. ಸಹಕಾರ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಕಂದಾಯ ಇಲಾಖೆಯಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಅವರು, ಸಾರ್ವಜನಿಕ ಹಾಗೂ ಸಹಕಾರ ಕ್ಷೇತ್ರದಲ್ಲಿ ತಮ್ಮದೇ ಆದ ಸೇವೆ ಸಲ್ಲಿಸಿದ್ದರು.
ಮೃತರು ಇಬ್ಬರು ಪುತ್ರರು, ಪುತ್ರಿ, ಸೊಸೆ, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.


