HomeFresh Newsಮಟ್ಟು ಬೀಚ್ ಬಳಿ ಕಡಲ್ಕೊರೆತ ಪ್ರದೇಶಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಮಟ್ಟು ಬೀಚ್ ಬಳಿ ಕಡಲ್ಕೊರೆತ ಪ್ರದೇಶಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಕಾಪು: ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಬೀಚ್ ಪ್ರದೇಶದಲ್ಲಿ ಉಂಟಾಗಿರುವ ಕಡಲ್ಕೊರೆತ ಸ್ಥಳಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಕಡಲ್ಕೊರೆತದಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ತಕ್ಷಣವೇ ಅಗತ್ಯ ತುರ್ತು ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕೋಟೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಯೋಗೀಶ್, ಮಾಜಿ ಸದಸ್ಯ ರಮೇಶ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕೋಟೆ ಶಕ್ತಿ ಕೇಂದ್ರದ ಹರ್ಷಿತ್, ಏಣಗುಡ್ಡೆ ಶಕ್ತಿ ಕೇಂದ್ರದ ಸಂತೋಷ್, ಸ್ಥಳೀಯರಾದ ಸತ್ಯನಾರಾಯಣ ರಾವ್ ಹಾಗೂ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಸಹಾಯಕ ಅಭಿಯಂತರ ಪ್ರಶಾಂತ್ ಉಪಸ್ಥಿತರಿದ್ದರು.

Sudha Interior new 1
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments